Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಇಬ್ಬರು ಅರೆಸ್ಟ್

ಲೈಂಗಿಕ ಕಿರುಕುಳ
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕಿಗೆ ಚಾಕೋಲೇಟ್ ಆಮಿಷ ತೋರಿಸಿ ಪ್ರೀತಿಸುವಂತೆ ಆರೋಪಿಗಳಾದ ಕಲಂದರ್ ಮತ್ತು ಶಾಬಿತ್ ಒತ್ತಡ ಹೇರಿದ್ದಾರೆ. ಬಾಲಕಿಗೆ ಅವರ ಒತ್ತಡಕ್ಕೆ ಮಣಿಯದಿದ್ದಾಗ ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿಗಳಾದ ಕಲಂದರ್ ಮತ್ತು ಶಾಬಿತ್, ಇನ್ನೂ ಹಲವಾರು ಮುಗ್ದ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಯೇ ಎನ್ನುವ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
  
ಆರೋಪಿಗಳನ್ನು ಬಂಧಿಸಿ ಅವರ ವಿರುದ್ದ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

26 ವರ್ಷಗಳ ನಂತ್ರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕನಿಗೆ ಪೆರೋಲ್