Publish Date: Sun, 31 Dec 2017 (13:37 IST)
Updated Date: Sun, 31 Dec 2017 (13:40 IST)
ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಕಾಲೇಜಿನ ಪ್ರಾಚಾರ್ಯನನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಪದವಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಅವರಿಗೆ ದೂರು ನೀಡಿದ್ದಳು. ದೂರನ್ನು ಗಂಭೀರವಾಗಿ ಪರಿಗಣಿಸಿದ ಅಣ್ಣಾಮಲೈ ಅವರು ಪ್ರಕರಣವನ್ನು ಮಹಿಳಾ ಪೊಲೀಸ್ ಠಾಣೆಗೆ ವಹಿಸಿದ್ದರು.
ಮಹಿಳಾ ಠಾಣೆಯ ಪೊಲೀಸರು ಪ್ರಾಚಾರ್ಯ ಪರಮೇಶ್ವರಪ‍್ಪ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.