Select Your Language

Notifications

webdunia
webdunia
webdunia
webdunia

ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ

Sexual harassment
bangalore , ಶುಕ್ರವಾರ, 8 ಡಿಸೆಂಬರ್ 2023 (15:42 IST)
ನಮ್ಮ ಮೆಟ್ರೋದಲ್ಲಿ ಈ ಹಿಂದೆ ಎರಡ್ಮೂರು ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಇದೀಗ ಮತ್ತೊಬ್ಬ ಯುವತಿಗೆ ಲೈಂಗಿಕ ಕಿರುಕುಳ ಆರೋಪ ಮಾಡಲಾಗಿದೆ.

ನಿನ್ನೆ ಬೆಳಗ್ಗೆ 9.40ರ ಸುಮಾರಿಗೆ ಬೆಂಗಳೂರಿನ ರಾಜಾಜಿನಗರದಲ್ಲಿ ಮೆಟ್ರೋ ಹತ್ತಿದ್ದ 22 ವರ್ಷದ ಯುವತಿಯ ಮೈಕೈ ಮುಟ್ಟಿದ್ದು, ಯುವತಿ ಕೂಗುತ್ತಿದ್ದಂತೆ ಮುಂದಿನ ನಿಲ್ದಾಣದಲ್ಲಿ ಪರಾರಿಯಾಗಲು ಯತ್ನಿಸಿದ ಆರೋಪಿ ಲೋಕೇಶ್​ನನ್ನು ಮೆಟ್ರೋ ಭದ್ರತಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಲಾಗಿದೆ.

ತನಿಖೆಯ ವೇಳೆ ಆರೋಪಿ ಲೋಕೇಶ್​ನ ಕರಾಳ ಇತಿಹಾಸ ಬಯಲಾಗಿದ್ದು, ಈತನ ಮೇಲೆ ಈ ಹಿಂದೆ ಕೂಡ ಕೆಲ ಕೇಸ್​ ಗಳಿತ್ತು. ಈ ಹಿಂದೆ ಬಿಎಂಟಿಸಿ ಬಸ್​ನಲ್ಲಿ ಯುವತಿಯ ಮೊಬೈಲ್ ಕಳ್ಳತನ ಮಾಡಲು ಹೋಗಿ ಸಿಕ್ಕಿಕೊಂಡಿದ್ದ. ತನಿಖೆಯ ವೇಳೆ ಲೊಕೇಶ್ ಕಳ್ಳತನವನ್ನು ಕಾಯಕ ಮಾಡಿರುವ ವಿಷಯ ಬಯಲಾಗಿದೆ. ಆರೋಪಿ ಬಳಿಯಿಂದ 20 ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಕೀಲನ ಹತ್ಯೆ.. 6 ಜನರ ವಿರುದ್ಧ FIR