Select Your Language

Notifications

webdunia
webdunia
webdunia
webdunia

ಮಂಗಳೂರಿನ ಖ್ಯಾತ ವಕೀಲನಿಂದ ಇಂಟರ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ

ಮಂಗಳೂರಿನ ಖ್ಯಾತ ವಕೀಲನಿಂದ ಇಂಟರ್ ಶಿಪ್  ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ
bangalore , ಮಂಗಳವಾರ, 19 ಅಕ್ಟೋಬರ್ 2021 (21:16 IST)
ಮಂಗಳೂರು ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದೆ.ಕಾನೂನು ವಿದ್ಯಾರ್ಥಿನಿಯೋರ್ವಳು ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಕಳೆದ ಆಗಸ್ಟ್ 8 ರಂದು ನ್ಯಾಯವಾದಿ ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು.ಈ ನಡುವೆ, ರಾಜೇಶ್ ಯುವತಿಯನ್ನು ಪುಸಲಾಯಿಸಿ ಸೆಕ್ಸ್ ನಡೆಸಲು ಒತ್ತಾಯಿಸುತ್ತಿದ್ದ. ಕಳೆದ ಸೆ.25 ರಂದು ತನ್ನ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆರೋಪಿ ವಿರುದ್ಧ ಸೆಕ್ಷನ್ 376,376-2,376(2)-ಕೆ,376 ಸಿ, 511, 354(), 354(2), 354 (2), 354 (8), 506, 34, 384, 388, 389 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ