Webdunia - Bharat's app for daily news and videos

Install App

ಮನೆ ಕೆಲಸದಾಕೆ ಮೇಲೆ ಲೈಂಗಿಕ ಕಿರುಕುಳ: ಎಚ್‌ ಡಿ ರೇವಣ್ಣಗೆ ಬಂಧನದ ಭೀತಿ

Sampriya
ಗುರುವಾರ, 2 ಮೇ 2024 (17:26 IST)
Photo Courtesy X
ಕಲಬುರಗಿ: ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಮನೆ ಕೆಲಸದಾಕೆ ನೀಡಿದ ದೂರಿನ ಅನ್ವಯ ಇದೀಗ ಮಾಜಿ ಸಚಿವ ಎಚ್ ಡಿ ರೇವಣ್ಣಗೆ  ಸಂಕಷ್ಟ ಎದುರಾಗಿದೆ.

ಹೊಳೆನರಸೀಪುರದಲ್ಲಿ ನಗರ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಕೇಸ್ ತನಿಖೆಯನ್ನ ಎಸ್‌ಐಟಿ ತೀವ್ರಗೊಳಿಸಿದ್ದು ಇದರಲ್ಲಿ ರೇವಣ್ಣ ಅವರು A1 ಆರೋಪಿಯಾಗಿದ್ದಾರೆ.

ಹೀಗಾಗಿ ಇಂದು ರೇವಣ್ಣ ಹೊಳೆನರಸೀಪುರ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಎರಡು ದಿನ ಸಮಯ ಕೇಳೋ ಸಾಧ್ಯತೆ ಇದೆ. ಆದರೆ ಈ ನಡುವೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವರು ರೇವಣ್ಣ ಗೆ ಬಂಧನದ ಎಚ್ಚರಿಕೆ ನೀಡಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಜ್ವಲ್ ರೇವಣ್ಣರ ಪೆನ್‌ಡ್ರೈವ್ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಈಗಾಗಲೇ ಲುಕ್​ಔಟ್ ನೋಟಿಸ್​ ನೀಡಲಾಗಿದೆ, ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ. ಇಂಥಾ ಪ್ರಕರಣಗಳಲ್ಲಿ ಕಾಲಾವಕಾಶ ಕೊಡಲು ಆಗೋದಿಲ್ಲ, ಹೀಗಾಗಿ ಅರೆಸ್ಟ್ ಮಾಡಲು ಎಸ್‌ಐಟಿ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ