ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂತಹ ನೀಚ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಕಿಡಿಕಾರಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ. ಆದರೆ, ಕೆಲವು ಕಿಡಿಗೇಡಿಗಳಿಂದ ಇಂತಹ ಕೃತ್ಯ ಸಡೆದಿದೆ. ಕಿಡಿಗೇಡಿಗಳ ವಯಸ್ಸಿನ ಅಂಹಕಾರವನ್ನು ಮಹಿಳೆಯರ ಮೇಲೆ ತೋರಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಯಾರು ಸಹ ಇಂತಹ ಹೀನ ಕೃತ್ಯದಲ್ಲಿ ತೊಡಗಬಾರದು ಎಂದು ಕಿವಿಮಾತು ಹೇಳಿದ ಸಚಿವೆ ಉಮಾಶ್ರೀ, ಪ್ರಕರಣದ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದರು.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರ ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.