Webdunia - Bharat's app for daily news and videos

Install App

ಲೈಂಗಿಕ ದೌರ್ಜನ್ಯ ಪ್ರಕರಣ: ಸಚಿವೆ ಉಮಾಶ್ರೀ ಕಿಡಿ

Webdunia
ಬುಧವಾರ, 4 ಜನವರಿ 2017 (15:09 IST)
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂತಹ ನೀಚ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಕಿಡಿಕಾರಿದ್ದಾರೆ.
 
ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ. ಆದರೆ, ಕೆಲವು ಕಿಡಿಗೇಡಿಗಳಿಂದ ಇಂತಹ ಕೃತ್ಯ ಸಡೆದಿದೆ. ಕಿಡಿಗೇಡಿಗಳ ವಯಸ್ಸಿನ ಅಂಹಕಾರವನ್ನು ಮಹಿಳೆಯರ ಮೇಲೆ ತೋರಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. 
 
ಯಾರು ಸಹ ಇಂತಹ ಹೀನ ಕೃತ್ಯದಲ್ಲಿ ತೊಡಗಬಾರದು ಎಂದು ಕಿವಿಮಾತು ಹೇಳಿದ ಸಚಿವೆ ಉಮಾಶ್ರೀ,  ಪ್ರಕರಣದ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದರು. 
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರ ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ