Select Your Language

Notifications

webdunia
webdunia
webdunia
webdunia

ಲೈಂಗಿಕ ದೌರ್ಜನ್ಯ ಪ್ರಕರಣ: ಪರಮೇಶ್ವರ್, ಅಬು ಅಜ್ಮಿಗೆ ನೋಟಿಸ್ ಜಾರಿ

ಲೈಂಗಿಕ ದೌರ್ಜನ್ಯ ಪ್ರಕರಣ: ಪರಮೇಶ್ವರ್, ಅಬು ಅಜ್ಮಿಗೆ ನೋಟಿಸ್ ಜಾರಿ
ಬೆಂಗಳೂರು , ಬುಧವಾರ, 4 ಜನವರಿ 2017 (12:55 IST)
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸಮನ್ಸ್ ಜಾರಿಗೊಳಿಸಿದೆ. 
 
ಡಾ.ಜಿ.ಪರಮೇಶ್ವರ್ ಹಾಗೂ ಅಬು ಅಜ್ಮಿ ಹೇಳಿಕೆ ಆಧರಿಸಿ ಸಮನ್ಸ್ ಜಾರಿಗೊಳಿಸಲಾಗಿದ್ದು, ಸಮನ್ಸ್‌ಗೆ ಉತ್ತರಿಸುವಂತೆ ಮಹಿಳಾ ಆಯೋಗ ಸೂಚಿಸಿದೆ.
 
ದೇಶದಲ್ಲಿರುವ 25 ಪ್ರತಿಶತದಷ್ಟು ಪುರುಷರು ಮಹಿಳೆಯರಿಗೆ ಗೌರವ ನೀಡುತ್ತಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರಮಂಗಲಂ ಆರೋಪಿಸಿದ್ದಾರೆ.
 
ಪಾಶ್ವಿಮಾತ್ಯ ಉಡುಪು ಧರಿಸುತ್ತಿರುವುದರಿಂದ ಮಹಿಳೆಯರ ಮೇಲೆ ಹಲ್ಲೆಗಳಾಗುತ್ತಿವೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುವುದು ಸಹಜ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿರುವ ಬೇಜವಾಬ್ದಾರಿ ಹೇಳಿಕೆಯನ್ನು ಖಂಡಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ, ಕೂಡಲೇ ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ. 
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರ ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಡಿಎಂಕೆ ಕಾರ್ಯ ನಿರ್ವಾಹಕ ಅಧ್ಯಕ್ಷರಾದ ಸ್ಟಾಲಿನ್