Select Your Language

Notifications

webdunia
webdunia
webdunia
webdunia

ಅಮೆರಿಕದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

ಅಮೆರಿಕದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ
ಮೈಸೂರು , ಬುಧವಾರ, 25 ನವೆಂಬರ್ 2015 (10:55 IST)
ಅಧ್ಯಯನಕ್ಕಾಗಿ ಮೈಸೂರು ಪ್ರವಾಸಕ್ಕೆ ಬಂದಿದ್ದ ಅಮೆರಿಕದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.  ವಿದ್ಯಾರ್ಥಿನಿ ಇನ್ನೂ 10 ಮಂದಿಯ ತಂಡದೊಂದಿಗೆ ಅಮೆರಿಕದಿಂದ ಭಾರತಕ್ಕೆ ಬಂದಿದ್ದರು. ನ. 6ರಂದು ಆರೋಗ್ಯ ಸಮಸ್ಯೆಯಿಂದ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಂದಿದ್ದರು.

ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸುಮಿತ್(24) ಅಮೆರಿಕದ ವಿದ್ಯಾರ್ಥಿನಿಗೆ ತಪಾಸಣೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದನೆಂದು ವಿದ್ಯಾರ್ಥಿನಿ ಆರೋಪಿಸಿದ್ದಳು.  ಸುಮೀತ್ ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಗ್ರಾಮಕ್ಕೆ ಸೇರಿದವನು.

ಪೊಲೀಸ್ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ ಬಳಿಕ  ನರಸಿಂಹ ರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

Share this Story:

Follow Webdunia kannada