ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಅಪರಾಧಿಗೆ ದಂಡ ಸಹಿತ 20 ವರ್ಷ ಜೈಲುಶಿಕ್ಷೆ

Webdunia
ಸೋಮವಾರ, 7 ಆಗಸ್ಟ್ 2023 (12:50 IST)
ಶಿವಮೊಗ್ಗ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗೆ ದಂಡ ಸಹಿತ 20 ವರ್ಷ ಜೈಲುಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ.
 
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ 27 ವರ್ಷದ ಯುವಕನಿಗೆ 20 ವರ್ಷ ಕಠಿಣಶಿಕ್ಷೆ ಹಾಗೂ ₹1.50 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ. ಹಾಗೂ ದಂಡದ ಹಣ ಕಟ್ಟಲು ವಿಫಲವಾದರೆ ಹೆಚ್ಚುವರಿ 9 ತಿಂಗಳು ಸಾದಾ ಶಿಕ್ಷೆ ನೀಡಲು ತಿಳಿಸಿದೆ.

2022ರಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಯುವಕನ ಮೇಲೆ ಕೇಳಿ ಬಂದಿತ್ತು. ಈ ಸಂಬಂಧ ಬಾಲಕಿಯ ತಂದೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. 1 ಲಕ್ಷದ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ