Publish Date: Wed, 02 Aug 2023 (12:38 IST)
Updated Date: Wed, 02 Aug 2023 (06:19 IST)
ಬೆಂಗಳೂರು : ಶಕ್ತಿ ಯೋಜನೆ ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ಗಳಲ್ಲಿ ವಿತರಿಸಲಾಗಿರುವ ಟಿಕೆಟ್ನ ಒಟ್ಟು ಮೊತ್ತದ ಮೊದಲ ಕಂತನ್ನು ಕರ್ನಾಟಕ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ.
ನಾಲ್ಕೂ ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯ ಟಿಕೆಟ್ ದರ 6,87,49,57,753 ರೂ. ಆಗಿದ್ದು, ಈ ಮೊತ್ತದ ಒಂದು ಪಾಲನ್ನು ಅಥವಾ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ. ನಿಗಮಗಳಿಗೆ ಮೊದಲ ಕಂತಿನ ಹಣವಾಗಿ 125.48 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್ಆರ್ಟಿಸಿ) 47.15 ಕೋಟಿ ರೂ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 21.85 ಕೋಟಿ ರೂ., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 32.57 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 23.90 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನಾಲ್ಕು ನಿಗಮಗಳಿಗೂ ಪ್ರತೇಕವಾಗಿ ಹಣ ಬಿಡುಗಡೆ ಮಾಡಲಾಗಿದೆ.