ಶಕ್ತಿ ಯೋಜನೆಗೆ ಡಾ.ವಿರೇಂದ್ರ ಹೆಗ್ಗಡೆ ಶ್ಲಾಘನೆ

Webdunia
ಶುಕ್ರವಾರ, 14 ಜುಲೈ 2023 (16:27 IST)
ಇತ್ತೀಚಿಗೆ 14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದಾರೆ.. ಪತ್ರದಲ್ಲಿ ಬರೆದಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಮೊದಲ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ 'ಶಕ್ತಿ ಯೋಜನೆ' ಯಿಂದ ಧರ್ಮಸ್ಥಳಕ್ಕೆ ಬರುವ ಮಹಿಳೆಯ ಪ್ರಮಾಣ ಹೆಚ್ಚಾಗಿದೆ. ಮಂಜುನಾಥ ಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ಕಾಣಿಕೆ ಹಾಕುತ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಅವಕಾಶ ಇದ್ದಾಗ ಧರ್ಮಸ್ಥಳಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಆಹ್ವಾನ ನೀಡಿದ್ದಾರೆ.. ಈ ಪತ್ರವನ್ನು ಟ್ವೀಟರ್​​ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ, 14 ನೇ ಬಜೆಟ್​ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಮುಂದಿನ ಸುದ್ದಿ
Show comments