ವೀರಶೈವ-ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸ ಮಾಡಿದ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಶಾಮನೂರು ಶಿವಶಂಕರ್

ಭಾನುವಾರ, 13 ಜನವರಿ 2019 (10:24 IST)
ದಾವಣಗೆರೆ : ವೀರಶೈವ-ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸ ಮಾಡಿದ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಕಾಂಗ್ರೆಸ್ ನಾಯಕರ ವಿರುದ್ಧ ಪಕ್ಷದ ಹಿರಿಯ ಮುಖಂಡ ಶಾಮನೂರು ಶಿವಶಂಕರ್ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದಾರೆ.


ನಗರದಲ್ಲಿ ರಾಷ್ಟ್ರೀಯ ವೀರಶೈವ ಮಠಾಧೀಶರ ಪರಿಷತ್‌ನಿಂದ ನಡೆದ ವೀರಶೈವ ಲಿಂಗಾಯತ ಧರ್ಮೋತ್ತೇಜನ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಮನೂರು ಶಿವಶಂಕರ್ ಅವರು,’ ವೀರಶೈವ-ಲಿಂಗಾಯತ ಎರಡೂ ಒಂದೇ ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಕೆಲವರು ಲಂಚ, ಬೇನಾಮಿಯಾಗಿ ಬಂದ ಹಣವನ್ನು ಬಳಸಿಕೊಂಡು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಷ್ಟದಿಂದ ದುಡಿದ ಹಣವಾಗಿದ್ದರೆ ಅವರಿಗೆ ಅರ್ಥ ಆಗುತ್ತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದೇ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ನಾಯಕ, ಗೃಹ ಸಚಿವ ಎಂ.ಬಿ.ಪಾಟೀಲ ವಿರುದ್ಧ ಕಿಡಿಕಾರಿದ ಶಾಮನೂರು ಶಿವಶಂಕರಪ್ಪ, ‘ವೀರಶೈವ-ಲಿಂಗಾಯತ ಸಮಾಜ ಸಂಘರ್ಷ ಸಮಯದಲ್ಲಿ ಎಂ.ಬಿ.ಪಾಟೀಲ್ ನನ್ನನ್ನು 'ಮುದಿ ಎತ್ತು' ಎಂದಿದ್ದರು, ಆದರೆ ಇದೇ 'ಮುದಿ ಎತ್ತು' ಚುನಾವಣಾ ಸಮಯದಲ್ಲಿ ಗೆದ್ದಿದೆ. ನನ್ನನ್ನು ಹೀಯಾಳಿಸಿದ ಮಾಜಿ ಸಚಿವ ವಿನಯ್ ಕುಲಕರ್ಣಿ ಸೋತಿದ್ದಾರೆ. ಎಂ.ಬಿ.ಪಾಟೀಲ ಅವರು ನೂರಾರು ಕೋಟಿ ಹಣ ಚೆಲ್ಲಿ ಗೆದ್ದಿದ್ದಾರಷ್ಟೆ ಎಂದು ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸೀತೆ ಅರಣ್ಯದಲ್ಲಿದ್ದಾಗ ಮಾಂಸ ಸೇವನೆ ಮಾಡಿದ್ದಾರೆ ಎಂದ ಚಿಂತಕಿ ವಿರುದ್ಧ ದೂರು ದಾಖಲು