Select Your Language

Notifications

webdunia
webdunia
webdunia
Tuesday, 1 April 2025
webdunia

ಒಂದೇ ಕುಟುಂಬದ ಐವರ ಆತ್ಮಹತ್ಯೆ : ಮನೆಯ ಹಿರಿಯ ಶಂಕರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ
bangalore , ಮಂಗಳವಾರ, 5 ಅಕ್ಟೋಬರ್ 2021 (20:17 IST)
ಬೆಂಗಳೂರು: ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರು ಸದಸ್ಯರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಮನೆಯ ಮಾಲೀಕ ಹಲ್ಲೆಗೆರೆ ಶಂಕರ್ ನ್ಯಾಯಾಲಯಕ್ಕೆ ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಂಡಿದೆ.
 
ಪ್ರಕರಣದಲ್ಲಿ ಶಂಕರ್ ಪೊಲೀಸರಿಂದ ಬಂಧನಕ್ಕೊಳಗಾದ ಬೆನ್ನಲ್ಲೇ ಜಾಮೀನಿಗಾಗಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಮುಂದೆ ಜಾಮೀನಿಗಾಗಿ ಹೈ ಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿವೆ. 
 
ಸೆಪ್ಟೆಂಬರ್ 17 ರಂದು ನಗರದ ಬ್ಯಾಡರಹಳ್ಳಿಯಲ್ಲಿರುವ ಶಂಕರ್ ಮನೆಯಲ್ಲಿ ಪತ್ನಿ, ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡ ಮರುದಿನ ಶಂಕರ್ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿದೆ. ಆದರೆ, ಆ ಅರ್ಜಿಯು ತಿರಸ್ಕೃತಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. 
 
ಬ್ಯಾಡರಹಳ್ಳಿ ತನಿಖೆಯ ತನಿಖೆ ಚುರುಕುಗೊಳಿಸಿ, ಆತ್ಮಹತ್ಯೆ ಮಾಡಿಕೊಂಡವರ ಮೊಬೈಲ್, ಲ್ಯಾಪ್‌ಟಾಪ್ ನಂತರದ ಅಂಶಗಳ ಬಗ್ಗೆ ಮಾಹಿತಿ ಕಲೆಹಾಕಲಾಗಿದೆ. ಶಂಕರ್ ವಿರುದ್ಧ ಪತ್ತೆಯಾದ ಸಾಕ್ಷ್ಯ ಪರಿಗಣಿಸಿ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಸುಕೈಡ್

Share this Story:

Follow Webdunia kannada

ಮುಂದಿನ ಸುದ್ದಿ

ಸ್ಪೀಕರ್ ಬಳಸಿ ವ್ಯಾಪಾರ ಮಾಡುತ್ತಿದ್ದವರಿಗೆ ಪೊಲೀಸರ ವಾರ್ನಿಂಗ್: 15 ಮೆಗಾ ಫೋನ್ ಸೀಜ್......