ಒಂದೇ ಕುಟುಂಬದ ಐವರ ಆತ್ಮಹತ್ಯೆ : ಮನೆಯ ಹಿರಿಯ ಶಂಕರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

Webdunia
ಮಂಗಳವಾರ, 5 ಅಕ್ಟೋಬರ್ 2021 (20:17 IST)
ಬೆಂಗಳೂರು: ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರು ಸದಸ್ಯರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಮನೆಯ ಮಾಲೀಕ ಹಲ್ಲೆಗೆರೆ ಶಂಕರ್ ನ್ಯಾಯಾಲಯಕ್ಕೆ ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಂಡಿದೆ.
 
ಪ್ರಕರಣದಲ್ಲಿ ಶಂಕರ್ ಪೊಲೀಸರಿಂದ ಬಂಧನಕ್ಕೊಳಗಾದ ಬೆನ್ನಲ್ಲೇ ಜಾಮೀನಿಗಾಗಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಮುಂದೆ ಜಾಮೀನಿಗಾಗಿ ಹೈ ಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿವೆ. 
 
ಸೆಪ್ಟೆಂಬರ್ 17 ರಂದು ನಗರದ ಬ್ಯಾಡರಹಳ್ಳಿಯಲ್ಲಿರುವ ಶಂಕರ್ ಮನೆಯಲ್ಲಿ ಪತ್ನಿ, ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡ ಮರುದಿನ ಶಂಕರ್ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿದೆ. ಆದರೆ, ಆ ಅರ್ಜಿಯು ತಿರಸ್ಕೃತಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. 
 
ಬ್ಯಾಡರಹಳ್ಳಿ ತನಿಖೆಯ ತನಿಖೆ ಚುರುಕುಗೊಳಿಸಿ, ಆತ್ಮಹತ್ಯೆ ಮಾಡಿಕೊಂಡವರ ಮೊಬೈಲ್, ಲ್ಯಾಪ್‌ಟಾಪ್ ನಂತರದ ಅಂಶಗಳ ಬಗ್ಗೆ ಮಾಹಿತಿ ಕಲೆಹಾಕಲಾಗಿದೆ. ಶಂಕರ್ ವಿರುದ್ಧ ಪತ್ತೆಯಾದ ಸಾಕ್ಷ್ಯ ಪರಿಗಣಿಸಿ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಸುಕೈಡ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಬಲು ದುಬಾರಿ

ಮುಂದಿನ ಸುದ್ದಿ
Show comments