Publish Date: Tue, 24 May 2022 (09:15 IST)
Updated Date: Tue, 24 May 2022 (09:32 IST)
ಬೆಳಗಾವಿ : ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದಲೇ ಕಾಂಗ್ರೆಸ್ ಪಕ್ಷ ನಿರ್ನಾಮವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದರು.
ಗೋಕಾಕ್ ನಗರದಲ್ಲಿ ನಡೆದ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಸಿದ್ದು-ಡಿಕೆಶಿ ಸೇರಿಕೊಂಡು ಪಕ್ಷವನ್ನು ನಿರ್ನಾಮ ಮಾಡ್ತಾರೆ. ಈಗಾಗಲೇ ಪಂಜಾಬ್ನ ಸಿಧು ಜೈಲುಸೇರಿದ್ದಾರೆ. ಇಲ್ಲಿ ಸಿದ್ದು ಕಾಂಗ್ರೆಸ್ ಅನ್ನು ಸಂಪೂರ್ಣ ನೆಲಕ್ಕುರುಳಿಸುತ್ತಾರೆ ಎಂದು ಕುಟುಕಿದರು.
2023ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಸುಮಾರು 150 ಸ್ಥಾನಗಳನ್ನು ಪಡೆದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.