Select Your Language

Notifications

webdunia
webdunia
webdunia
webdunia

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಜಿಲ್ಲಾಡಳಿತ

ಸ್ವಾತಂತ್ರ್ಯ ದಿನಾಚರಣೆ
ಚಿತ್ರದುರ್ಗ , ಶುಕ್ರವಾರ, 14 ಆಗಸ್ಟ್ 2020 (18:31 IST)
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸರಳವಾಗಿ ಆಚರಿಸಲಾಗುತ್ತಿದೆ.


ಭಾರತದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿತ್ರದುರ್ಗ ಜಿಲ್ಲಾಡಳಿತದ ವತಿಯಿಂದ ಈ ಬಾರಿ ಸ್ವಾತಂತ್ರ್ಯ ಹೋರಾಟಗಾರರ ಮನೆ ಬಾಗಿಲಿಗೆ ಹೋಗಿ ಸ್ವಾತಂತ್ರ್ಯ ಹೋರಾಟಗಾರರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವ ಸಮರ್ಪಿಸಲಾಯಿತು.

ಹಿರಿಯೂರು ತಾಲ್ಲೂಕಿನ ಕೋವೇರಹಟ್ಟಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಎ.ಗೋವಿಂದಪ್ಪ ಹಾಗೂ ಮರಡಿಹಳ್ಳಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಭೀಮಪ್ಪ ಮತ್ತು ಹನುಮಂತಪ್ಪ ಹಾಗೂ ಚಿತ್ರದುರ್ಗ ತಾಲ್ಲೂಕಿನ ನರೇನಾಳ್ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ತಿಮ್ಮಾರೆಡ್ಡಿ ಸೇರಿದಂತೆ ನಾಲ್ಕು ಜನ ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ ಮಾಡಲಾಯಿತು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ ಸೇರಿದಂತೆ ತಾಲ್ಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳಿದ್ದರು.



Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರಕಾರದಿಂದ ಮತ್ತೊಂದು ಕೊಡುಗೆ