Select Your Language

Notifications

webdunia
webdunia
webdunia
webdunia

ಶಾಸಕ ಹ್ಯಾರೀಸ್ ಪುತ್ರನ ಬಂಧನಕ್ಕೆ ಶೆಟ್ಟರ್ ಒತ್ತಾಯ

ಶಾಸಕ ಹ್ಯಾರೀಸ್ ಪುತ್ರನ ಬಂಧನಕ್ಕೆ ಶೆಟ್ಟರ್ ಒತ್ತಾಯ
ಹುಬ್ಬಳ್ಳಿ , ಭಾನುವಾರ, 18 ಫೆಬ್ರವರಿ 2018 (17:40 IST)
ಉದ್ಯಮಿಯ ಪುತ್ರನ ಮೇಲೆ ಹಲ್ಲೆ ನಡೆದ ಪ್ರಕರಣ ಆರೋಪಿಯಾಗಿರುವ ಶಾಸಕ ಎನ್.ಎ.ಹ್ಯಾರೀಸ್ ಅವರ ಪುತ್ರನನ್ನು ಹಾಗೂ ಇತರೆ ಆರೋಪಿಗಳನ್ನು ಬಂಧಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳ ಮಕ್ಕಳು ಹಲ್ಲೆ ನಡೆಸುವ ವರ್ತನೆ ಬೆಳೆಸಿಕೊಳ್ಳುವುದು ಸರಿಯಲ್ಲ. ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಅವರ ಪುತ್ರನ ವರ್ತನೆ ಖಂಡನೀಯ ಎಂದು ತಿಳಿಸಿದ್ದಾರೆ.
 
ಪೊಲೀಸರು ಯಾವುದೇ ಪ್ರಭಾವಕ್ಕೆ ಒಳಗಾಗದೆ ಆರೋಪಿಗಳನ್ನು ಬಂಧಿಸಿ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನೇ ಗೆಲುವು ಸಾಧಿಸುತ್ತೇನೆ. ಇದರಲ್ಲಿ ಸಂಶಯವೇ ಇಲ್ಲ ಎಂದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಆರ್ಥಿಕ ಸ್ಥಿತಿಗತಿ ಹೇಗಿದೆ ಎಂಬುದರ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಮಾಧ್ಯಮಗಳ ಕೈಗೆ ಸಿಗುವುದೇ ಇಲ್ಲವಲ್ವಾ? ಸಿಎಂ ಲೇವಡಿ