Publish Date: Wed, 28 Jan 2026 (08:30 IST)
Updated Date: Wed, 28 Jan 2026 (08:35 IST)
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿಮ ಧಮ್ಕಿ ಹಾಕಿದ ಪ್ರಕರಣ ಸಂಬಂಧ ಕೈ ನಾಯಕ ರಾಜೀವ್ ಗೌಡ ಇದೀಗ ಜೈಲು ಪಾಲಾಗಿದ್ದಾರೆ.
ಕೇರಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಪೊಲೀಸ್ ಕೈಗೆ ಸಿಕ್ಕಿಬಿದ್ದ ರಾಜೀವ್‌ರನ್ನು ವಶಕ್ಕೆ ಪಡೆದ ಪೊಲೀಸರುವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದ ಬಳಿಕ ಪೊಲೀಸರು ಇಂದು ಜೆಎಂಎಫ್‌ಸಿ ಕೋರ್ಟ್ ಮುಂದೆ ಹಾಜರು ಪಡಿಸಿದರು. ರಾಜೀವ್‌ಗೌಡ ಪರ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿ ಜಾಮೀನು ಅರ್ಜಿ ಸಲ್ಲಿಸಿದರು.
ಪೊಲೀಸರ ಪರ ವಾದ ಮಂಡಿಸಿದ ವಕೀಲ ಮೊಹಮ್ಮದ್ ಖ್ವಾಜಾ, ತನಿಖೆ ಸಂಬಂಧ ಆರೋಪಿಯ ಮೊಬೈಲ್ ಅನ್ನು ಸೀಜ್ ಮಾಡಬೇಕಿದ್ದು, ಪರಾರಿಯಾಗಲು ಯತ್ನಿಸಿದ್ದ ಖಾರು ವಶಕ್ಕೆ ಪಡೆಯಬೇಕಿದೆ. ಇನ್ನೂ ವಿಚಾರಣೆ ನಡೆಸಬೇಕಿದ್ದು, ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಅಂತ ವಾದಿಸಿದರು. ಅಂತಿಮವಾಗಿ ರಾಜೀವ್‌ಗೌಡನ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್ 14 ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ರಾಜೀವ್‌ಗೌಡಗೆ ಆಶ್ರಯ ನೀಡಿದ್ದ ಮಂಗಳೂರು ಉದ್ಯಮಿ ಮೈಕಲ್‌ಗೆ ಜಾಮೀನು ಮಂಜೂರಾಯ್ತು. ಈ ಮಧ್ಯೆ, ರಾಜೀವ್‌ಗೌಡ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ಹೇಳಿದರು..