ನವದೆಹಲಿ: ಉಪ ಚುನಾವಣೆಯಲ್ಲಿ ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿ ಗೆಲುವ ಸಾಧಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಶನಿವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬುಲಾವ್ ಮೇರೆಗೆ ದೆಹಲಿಗೆ ಬಂದಿದ್ದೇನೆ. ಅವರು, ಮಹಾರಾಷ್ಟ್ರ ಜಾರ್ಖಂಡ್ ಸಂಸದೀಯ ಮಂಡಳಿ ಸಭೆ ನಡೆಸಿ ಬಳಿಕ ನಮಗೆ ಸಮಯ ನೀಡುತ್ತಾರೆ. ಅವರ ಭೇಟಿ ಬಳಿಕ ಶಿಗ್ಗಾವಿ ಉಪ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಶಿಗ್ಗಾವಿಯಲ್ಲಿ ಯಾರು ಗೆಲ್ಲುತ್ತಾರೆಂಬ ಆಧಾರದ ಮೇರೆಗೆ ಯಾರು ಅಭ್ಯರ್ಥಿ ಎಂದು ನಿರ್ಧರಿಸಲಾಗುತ್ತದೆ. ನಾಳೆಯ ಸಭೆಯಲ್ಲಿ ಎಲ್ಲವೂ ಚರ್ಚೆ ನಡೆಯುತ್ತದೆ. ಇನ್ನೂ ಶಿಗ್ಗಾವಿ, ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ ಮಾಡಲಿದ್ದೇವೆ ಎಂಧರು.
ಇನ್ನೂ ಶಿಗ್ಗಾವಿಯಲ್ಲಿ ಸ್ಥಳೀಯ ಮುಖಂಡರು ಭರತ್ ಬೊಮ್ಮಾಯಿಯವರಿಗೆ ಟಿಕೆಟ್ ನೀಡಬೇಕೆಂಬ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಅಲ್ಲಿ ಇಷ್ಟು ವರ್ಷ ಉತ್ತಮ ಕೆಲಸ ಮಾಡಿರುವುದನ್ನು ನೋಡಿ ನನ್ನ ಮಗನ ಹೆಸರು ಹೇಳಿರಬಹುದು. ಆದರೆ ವೈಯಕ್ತಿಕ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ಬೇಡ ಅಂತ ಅಂತ ಹೇಳಿದ್ದೇನೆ. ಈ ಎಲ್ಲ ಬೆಳವಣಿಗೆ ಬಗ್ಗೆ ಜೆಪಿ ನಡ್ಡಾ ಜತೆಗೆ ಚರ್ಚೆಯಾಗಲಿದೆ ಎಂದು ಅವರು ಹೇಳಿದರು.