Webdunia - Bharat's app for daily news and videos

Install App

ಶಿಗ್ಗಾಂವಿಯಲ್ಲಿ ಮತ್ತೆ ಗುಂಡಿನ ದಾಳಿ: ಮಹಿಳೆ ಸೇರಿ 14 ಮಂದಿ ಪಾರು

Webdunia
ಗುರುವಾರ, 26 ಮೇ 2022 (16:37 IST)

ಶಿಗ್ಗಾಂವಿಯ ಶೂಟೌಟ್ ಪ್ರಕರಣ ಮಾಸುವ ಮುನ್ನವೇ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹುಲಗೂರು ಗ್ರಾಮದಲ್ಲಿ ಫೈರಿಂಗ್ ನಡೆದಿದೆ.
ಗ್ರಾಮದ ಮಹಿಳೆ ಸಲ್ಮಾ ಮನೆಯ ಕಟ್ಟೆ ಮೇಲೆ ಕುಳಿತಿದ್ದ ವೇಳೆ ಬೈಕ್ ಮೇಲೆ ಬಂದಿದ್ದ ಮುಸುಕುಧಾರಿಗಳು ಗುಂಡು ಹಾರಿಸಿದ್ದಾರೆ. ಅದೇ ವೇಳೆಯಲ್ಲಿ ಕರೆಂಟ್ ಹೋಗಿದ್ದು, ಕತ್ತಲಾಗಿದ್ದರಿಂದ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡು ಮಹಿಳೆ ಮನೆಯೊಳಗೆ ಓಡಿ ಹೋಗಿದ್ದಾಳೆ. ಇದರಿಂದಾಗಿ ಮನೆಯ ಗೋಡೆಗೆ ಒಳಗೆ ಗುಂಡು ತಾಗಿದೆ.
ಗುಂಡಿನ ದಾಳಿಯಲ್ಲಿ ಮಹಿಳೆ ಹಾಗೂ ಮಹಿಳೆಯ ಮನೆಯವರು 14 ಜನರು ಪಾರಾಗಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಬೆಚ್ಚಿಬಿದ್ದ ಅಲ್ಲಿನ ಜನರು ಸಲ್ಮಾಳ ಮನೆ ಬಳಿ ಜಮಾಯಿಸಿದ್ದಾರೆ. ಅಷ್ಟರಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯಲ್ಲಿ ದುಷ್ಕರ್ಮಿಗಳ ಬಂದೂಕಿನಿಂದ ಒಂದು ಸುತ್ತು ಗುಂಡು ಹಾರಿದೆ.
ವಿಷಯ ತಿಳಿಯುತ್ತಿದ್ದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಎಸ್‍ಪಿ ವಿಜಯ್‍ಕುಮಾರ್ ಸೇರಿದಂತೆ ಶಿಗ್ಗಾಂವಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments