Publish Date: Tue, 16 Aug 2022 (17:55 IST)
Updated Date: Tue, 16 Aug 2022 (18:00 IST)
ಫ್ಲೆಕ್ಸ್ ವಿಚಾರದಲ್ಲಿ ಸಂಘರ್ಷವಾಗಿದೆ. ನಮ್ಮ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು, ಎಲ್ಲವನ್ನು ಸಮಾಧಾನ ಪಡಿಸುತ್ತಿದ್ದರು. ಆದರೆ, ಎಂ.ಕೆ.ಕೆ ರಸ್ತೆ ತಿರುವಿನಲ್ಲಿ ಚಾಕು ಇರಿತವಾಗಿದೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಕೃತ್ಯದಲ್ಲಿ ಭಾಗಿಯಾದವರ ಮಾಹಿತಿ ಲಭ್ಯವಾಗಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು. ನಮ್ಮ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ. ಚಾಕು ಇರಿತ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳಿದ್ದು, ಇದರಲ್ಲಿ ನದೀಮ್ ಹಾಗೂ ಅಬ್ದುಲ್ ರೆಹಮಾನ್ನನ್ನು ದಸ್ತಗಿರಿ ಮಾಡಲಾಗಿದೆ. ಇನ್ನಿಬ್ಬರ ಹುಡುಕಾಟಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.