Publish Date: Wed, 03 Oct 2018 (16:42 IST)
Updated Date: Wed, 03 Oct 2018 (16:44 IST)
ಶಿರಾಡಿ ಘಾಟ್ ಸಂಚಾರ ಬಂದ್ ಆಗಿದ್ದರಿಂದ ಕರಾವಳಿ ಭಾಗದಲ್ಲಿ ತೀವ್ರ ತೊಂದರೆಯಾಗಿತ್ತು. ಇಂದಿನಿಂದ ಎಲ್ಲಾ ರೀತಿಯ ಬಸ್ ಗಳ ಸಂಚಾರಕ್ಕೆ ಮುಕ್ತವಾಗಿದೆ. ಹೀಗಾಗಿ ವಾಹನಗಳ ಸವಾರರು, ಜನರು ಹರ್ಷ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂದೂರಿ ಮಾಹಿತಿ ನೀಡಿದ್ದು, ಶಿರಾಡಿ ಘಾಟ್ ನಲ್ಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ಸದ್ಯಕ್ಕೆ ಅವಕಾಶ ಇಲ್ಲ. ಎರಡು ಕಡೆ ಆಯಕಟ್ಟಿನ ಪ್ರದೇಶಗಳಲ್ಲಿ ಏಕಮುಖ ಸಂಚಾರ ಜಾರಿ ಮಾಡಲಾಗಿದೆ.
ಪೊಲೀಸರು ಸ್ಥಳದಲ್ಲೇ ಇದ್ದು ಸಂಚಾರಕ್ಕೆ ಅನುವು ಮಾಡಿಕೊಡಲಿದ್ದಾರೆ. ಸೆ.5ರಿಂದ ಲಘುವಾಹನಗಳ ಸಂಚಾರ ಆರಂಭಗೊಂಡಿತ್ತು.
ಈಚೆಗೆ ಸುರಿದ ಮಳೆಯಿಂದ ಗುಡ್ಡ ಕುಸಿತವಾದ ಹಿನ್ನೆಲೆಯಲ್ಲಿ ಶಿರಾಡಿಘಾಟ್ ರಸ್ತೆ ಸಂಚಾರ ಬಂದ್ ಆಗಿತ್ತು. ಮಣ್ಣು ತೆರವು ಕಾರ್ಯಾಚರಣೆ ಪೂರ್ಣಗೊಂಡ ಹಿನ್ನಲೆಯಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.