ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

Krishnaveni K
ಮಂಗಳವಾರ, 17 ಜೂನ್ 2025 (10:23 IST)
ಬೆಂಗಳೂರು: ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿಯಿಂದ ಮಂಗಳೂರು, ಬೆಂಗಳೂರು ನಡುವೆ ಮತ್ತೆ ಪ್ರಯಾಣಕ್ಕೆ ತೊಂದರೆ ಎದುರಾಗಿದೆ. ಪ್ರತೀ ವರ್ಷದ ಸಮಸ್ಯೆ ಈ ವರ್ಷವೂ ಎದುರಾಗಿದೆ.

ಮಳೆಗಾಲ ಬಂತೆಂದರೆ ಕರಾವಳಿ ನಗರಕ್ಕೆ ಬೆಂಗಳೂರಿನಿಂದ ತೆರಳುವುದೇ ದೊಡ್ಡ ತಲೆನೋವು. ಯಾವಾಗ ಗುಡ್ಡು ಕುಸಿತವಾಗುತ್ತದೆ, ಯಾವಾಗ ರಸ್ತೆ ಬ್ಲಾಕ್ ಆಗುತ್ತದೆ ಎಂದು ಹೇಳಲಾಗದು. ಇದೀಗ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಿರಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತವಾಗುತ್ತಿದೆ.

ಶಿರಾಡಿ ಘಾಟಿಯಲ್ಲಿ ಈ ಬಾರಿ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾರ್ಯವೂ ನಡೆಯುತ್ತಿರುವುದರಿಂದ ಗುಡ್ಡ ಕುಸಿತದ ಭೀತು ಹೆಚ್ಚಾಗಿದೆ. ರಸ್ತೆ ಕಾಮಗಾರಿ ಕಾರ್ಯ ಸಂಪೂರ್ಣವಾಗಿಲ್ಲ. ಹೀಗಾಗಿ ಬೃಹದಾಕಾರದ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಇದರಿಂದ ಈ ರಸ್ತೆಯಲ್ಲಿ ಸಂಚಾರ ಮಾಡುವುದೇ ಅಪಾಯಕಾರಿಯಾಗಿದೆ. ಶಿರಾಡಿ ಘಾಟಿ ಮಾರ್ಗವಾಗಿ ಸಂಚಾರ ಮಾಡುವಾಗ ಜೀವ ಕೈಯಲ್ಲಿ ಹಿಡಿದುಕೊಂಡೇ ಸಂಚಾರ ಮಾಡಬೇಕಾಗಿದೆ. ಮಳೆಗಾಲದ ವೇಳೆ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೆ ಈ ಸಮಸ್ಯೆಯಿರುತ್ತಿರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments