Publish Date: Wed, 07 Dec 2022 (08:49 IST)
Updated Date: Wed, 07 Dec 2022 (09:20 IST)
ಕಾರವಾರ : ಇದೇ ಮೊದಲ ಬಾರಿಗೆ ಸಾರ್ವಜನಿಕ ವೇದಿಕೆಯಲ್ಲಿ ಶಿರಸಿ ಪ್ರತ್ಯೇಕ ಜಿಲ್ಲೆ ಕುರಿತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿದ್ದು, ಜಿಲ್ಲೆಯ ರಚನೆಯ ಕುರಿತು ಸಕಾರಾತ್ಮಕ ಸ್ಪಂದನೆ ಮಾಡಿದ್ದಾರೆ.
ಶಿರಸಿಯಲ್ಲಿ ನಡೆದ ಕಾರ್ಮಿಕ ಇಲಾಖೆ ರಾಜ್ಯ ವಿಮಾ ಯೋಜನೆ ಚಿಕಿತ್ಸಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ರಾಜ್ಯದ ವಿವಿಧ ಜಿಲ್ಲೆ ವಿಭಜಿಸಿ ಪ್ರತ್ಯೇಕ ಜಿಲ್ಲೆ ರಚನೆಯಾಗಿದೆ.
ಘಟ್ಟದ ಮೇಲಿನ ತಾಲೂಕುಗಳನ್ನು ಒಳಗೊಂಡ ಶಿರಸಿ ಪ್ರತ್ಯೇಕ ಜಿಲ್ಲೆಯ ಬೇಡಿಕೆಗೆ ಬಲ ಬರುತ್ತಿದೆ. ಈ ಬಗ್ಗೆ ಸಾರ್ವಜನಿಕರು ನನ್ನ ಹಾಗೂ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಕೇಳುತ್ತಿದ್ದಾರೆ ಎಂದರು.
ಪ್ರತ್ಯೇಕ ಜಿಲ್ಲೆ ಬೇಡಿಕೆ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಬಳಿ ಚರ್ಚಿಸಲಾಗಿದೆ.