Publish Date: Tue, 24 Jul 2018 (10:20 IST)
Updated Date: Tue, 24 Jul 2018 (10:23 IST)
ಉಡುಪಿ: ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳ ಜತೆ ಸಂಪರ್ಕ ಹೊಂದಿದ್ದರೆನ್ನಲಾದ ರಮ್ಯಾ ಶೆಟ್ಟಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಮೊದಲು ರಮ್ಯಾ ಶೆಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು ನಂತರ ಹೋಗಲು ಅನುಮತಿ ನೀಡಿದ್ದರು. ಆದರೆ ಇದೀಗ ಮತ್ತೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಬಳಿ ರಮ್ಯಾ ಶೆಟ್ಟಿ ಹಾಗೂ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ರಮ್ಯಾ ಶೆಟ್ಟಿ ಹಾಗೂ ಅವರ ಜತೆಗಿದ್ದ ಮೂವರು ಮಹಿಳೆಯರು, ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ಕಾಪು ಪೊಲೀಸರ ವಶಕ್ಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.
Krishnaveni K
Publish Date: Tue, 24 Jul 2018 (10:20 IST)
Updated Date: Tue, 24 Jul 2018 (10:23 IST)