Select Your Language

Notifications

webdunia
webdunia
webdunia
webdunia

ಶಿವಸೇನೆಗೆ ಬೆಂಕಿ ಹಚ್ಚಿ ಆಕ್ರೋಶ

ಶಿವಸೇನೆ
ಶಿವಸೇನೆ ಬ್ಯಾನರ್ ಗೆ ಬೆಂಕಿ ಹಚ್ಚಿ ಕನ್ನಡ ಪರ ಸಂಘಟನೆಗಳ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಶಿವಸೇನೆ  ಉದ್ಧಟತನ ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಮಹಾರಾಷ್ಟ್ರದ ಕೊಲ್ಹಾಪೂರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಕೃತ್ಯ ಖಂಡಿಸಿ ಹಾಗೂ ಕನ್ನಡ ಚಿತ್ರ ಅವನೇ ಶ್ರೀಮನ್ನಾರಾಯಣ ಪ್ರದರ್ಶನಕ್ಕೆ ಅಡ್ಡಿಪಡಿಸಿ ಕನ್ನಡಿಗರ ಭಾವನೆಗೆ ನೋವುಂಟು ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಯಿತು.

ಕರ್ನಾಟಕದಲ್ಲಿ ಶಿವಸೇನೆಗೆ ಬಹಿಷ್ಕಾರ ಹಾಕುವಂತೆ ಮತ್ತು ಗಡಿವಿವಾದ ವಿಚಾರದಲ್ಲಿ ಕರ್ನಾಟಕದ ರಾಜಕಾರಣಿಗಳು ಕನ್ನಡಪರ ಧ್ವನಿ ಎತ್ತುವಂತೆ ಆಗ್ರಹಿಸಲಾಯಿತು.

ಪ್ರತಿಭಟನಾಕಾರರು ಮಹಾರಾಷ್ಟ್ರ ಸರ್ಕಾರ, ಶಿವಸೇನೆ, ಎಮ್ ಇ ಎಸ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಘೋಷಣೆ ಕೂಗಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ನಾನು ಸಚಿವ ಸ್ಥಾನದ ಆಕಾಂಕ್ಷಿ - ಶಾಸಕ ದೊಡ್ಡನಗೌಡ ಪಾಟೀಲ್