Webdunia - Bharat's app for daily news and videos

Install App

ಶಿವಕುಮಾರ್‌ಗೆ ರಿಯಲ್ ಎಸ್ಟೇಟ್ ಮೇಲೆ ಅಷ್ಟೇ ಆಸಕ್ತಿ: ವಿಜಯೇಂದ್ರ

Sampriya
ಗುರುವಾರ, 11 ಜುಲೈ 2024 (15:39 IST)
Photo Courtesy X
ಬೆಂಗಳೂರು: ಕರ್ನಾಟಕ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದರು ಮತ್ತು ಕರ್ನಾಟಕ ಸರ್ಕಾರವು ಈ ಬಗ್ಗೆ ಚಿಂತೆಯೇ ಮಾಡುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.

"ರಾಜ್ಯ ಸರ್ಕಾರವು ಸ್ವಲ್ಪವೂ ತಲೆಕೆಡಿಸಿಕೊಂಡಿಲ್ಲ, ಸಂಬಂಧಪಟ್ಟ ಸಚಿವರು ಸಹ ಬೆಂಗಳೂರಿನಲ್ಲಿ ಕುಳಿತು ರಾಜ್ಯ ಪ್ರವಾಸ ಮಾಡುತ್ತಿಲ್ಲ, ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿಲ್ಲ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಮತ್ತು ಸಾವುಗಳು ಹೆಚ್ಚಾಗುತ್ತಿವೆ. ನನ್ನ ಕ್ಷೇತ್ರದಲ್ಲಿ ಡೆಂಗೆಯಿಂದ ಒಂಬತ್ತು ತಿಂಗಳ ಮಗು ಸಾವನ್ನಪ್ಪಿದೆ, ಈ ವಿಷಯವನ್ನು ವಿಧಾನಸಭೆಯಲ್ಲೂ ಪ್ರಸ್ತಾಪಿಸುತ್ತೇವೆ ಎಂದು ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದರು.

ಇನ್ನು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅವರಿಗೆ ರಿಯಲ್ ಎಸ್ಟೇಟ್ ನಲ್ಲಿ ಮಾತ್ರ ಆಸಕ್ತಿ ಇದೆ.

''ಈಗಿನ ಕಾಂಗ್ರೆಸ್ ಸರಕಾರಕ್ಕೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಈಗ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಬಗ್ಗೆ ಉಪ ಸಿಎಂ ಡಿ.ಕೆ.ಶಿವಕುಮಾರ್ ಮಾತನಾಡುತ್ತಿದ್ದಾರೆ. ಈ ನಿರ್ಧಾರದ ಹಿಂದಿನ ಅಜೆಂಡಾ ಏನೆಂಬುದು ದೇವರೇ ಬಲ್ಲ. ಡಿಕೆ ಶಿವಕುಮಾರ್ ಅವರಿಗೆ ರಿಯಲ್ ಎಸ್ಟೇಟ್‌ನಲ್ಲಿ ಮಾತ್ರ ಆಸಕ್ತಿ ಇದೆ ಎಂಬುದು ಇಡೀ ಕರ್ನಾಟಕಕ್ಕೆ ಗೊತ್ತು, ಇದು ರಾಜಕೀಯ ಗಿಮಿಕ್ ಎಂದು ನಾನು ಭಾವಿಸುತ್ತೇನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments