Publish Date: Sat, 27 Jan 2018 (07:07 IST)
Updated Date: Sat, 27 Jan 2018 (07:08 IST)
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿನ್ನೆಯಷ್ಟೇ ಶ್ರೀಗಳಿಗೆ ಸ್ಟೆಂಟ್ ಅಳವಡಿಸಲು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರಲಿಲ್ಲ.
ಇಂದು ಬೆಳ್ಳಂ ಬೆಳಿಗ್ಗೆಯೇ ಶ್ರೀಗಳು ಎಂದಿನಂತೆ ತಮ್ಮ ಪೂಜಾ ಕಂಕೈರ್ಯಗಳನ್ನು ನೆರವೇರಿಸಿದ್ದಾರೆ ಎನ್ನಲಾಗಿದೆ. ಇಂದಿನ ಸ್ಥಿತಿಗತಿ ನೋಡಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ಮೂಲಗಳು ಹೇಳಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ