Webdunia - Bharat's app for daily news and videos

Install App

ರೈತರಿಗೆ ಕೆಂಪು ನೋಟು ಕೊಟ್ಟು ವೋಟು ಹಾಕಿಸಿಕೊಳ್ಳುತ್ತಿದ್ದೀರಾ ಮೋದಿಯವರೇ?-ಶಿವಲಿಂಗೇಗೌಡ ವ್ಯಂಗ್ಯ

Webdunia
ಗುರುವಾರ, 28 ಫೆಬ್ರವರಿ 2019 (08:25 IST)
ಹಾಸನ : ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಪ್ರಧಾನಿ ಮೋದಿ ಅವರು ರೈತರಿಗೆ 2000 ರೂ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗ ರೈತರ ಬಗ್ಗೆ ಕಾಳಜಿ ಬಂದಿದೆ ಎಂದು ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ವ್ಯಂಗ್ಯವಾಡಿದ್ದಾರೆ.


ಫೆ 1 ರಂದು ಮಂಡನೆಯಾದ ಮಧ್ಯಂತರ ಬಜೆಟ್ ನಲ್ಲಿ 5 ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ಪ್ರತಿ ರೈತರಿಗೆ ವಾರ್ಷಿಕ 6000ರೂ ನೀಡಲಾಗುವುದು. ಪ್ರತಿ 4 ತಿಂಗಳಿಗೊಮ್ಮೆ  2000 ರೂ. ರೈತರ ಖಾತೆಗೆ ಜಮಾ ಮಾಡುವುದಾಗಿ ತಿಳಿಸಿದ್ದರು. ಅದರಂತೆ ಪ್ರಧಾನಿ ಮೋದಿ ಫೆ. 24 ರಂದು ರೈತರಿಗೆ ಚೆಕ್ ನೀಡುವುದರ ಮೂಲಕ ಈ ಯೋಜನೆಗೆ ಚಾಲನೆ ನೀಡಿದ್ದರು.


ಈ ಬಗ್ಗೆ ಮಾತನಾಡಿದ ಶಿವಲಿಂಗೇಗೌಡ,’ ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗ ರೈತರ ಪರ ಕಾಳಜಿ ಬಂದಿದ್ದು, ಈಗ ರೈತರ ಖಾತೆಗೆ ಎರಡು ಸಾವಿರ ರೂ. ಹಣ ಜಮಾ ಮಾಡ್ತಿದ್ದಾರೆ. ಸರ್ಕಾರದ ಹಣವನ್ನ ರೈತ್ರಿಗೆ ಹಂಚುತ್ತಿದ್ದೀರಿ, ಎರಡು ಸಾವಿರ ರೂಪಾಯಿ ಕೆಂಪು ನೋಟು ಕೊಟ್ಟು ವೋಟು ಹಾಕಿಸಿಕೊಳ್ಳುತ್ತಿದ್ದೀರಾ? ಮೋದಿಯವರೇ ಎಂದು ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments