Webdunia - Bharat's app for daily news and videos

Install App

ಮೋದಿ ದೇಶದ ಪ್ರತಿಯೊಬ್ಬ ನಾಗರಿಕರ ಮೇಲೆ 4.68 ಲಕ್ಷ ಸಾಲ ಹೊರಿಸಿದ್ದಾರೆ: ಶಿವಲಿಂಗೇಗೌಡ ಕಿಡಿ

Krishnaveni K
ಬುಧವಾರ, 19 ಮಾರ್ಚ್ 2025 (17:22 IST)
Photo Credit: X
ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಾಕಷ್ಟು ಸಾಲ ಮಾಡಿದೆ ಎಂದು ಕಿಡಿ ಕಾರಿರುವ ಶಾಸಕ ಶಿವಲಿಂಗೇಗೌಡ ಮೋದಿ ಪ್ರತಿಯೊಬ್ಬ ನಾಗರಿಕರ ಮೇಲೆ 4.6 ಲಕ್ಷ ಸಾಲ ಮಾಡಿದ್ದಾರೆ ಎಂದಿದ್ದಾರೆ.

ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಕಾಂಗ್ರೆಸ್ ಸದಸ್ಯ ಶಿವಲಿಂಗೇಗೌಡ, ಬಿಜೆಪಿಯವರಿಗೆ ರಾಜ್ಯ ಸರ್ಕಾರದ ಸಾಲದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಯಾಕೆಂದರೆ ಮೋದಿ ಮುಂದೆ ಹುಟ್ಟಲಿರುವ ಮಗುವಿನ ಮೇಲೂ ಸಾಲದ ಹೊರೆ ಹೊರಿಸಿದ್ದಾರೆ ಎಂದಿದ್ದಾರೆ.

ಕೇಂದ್ರ ಸರ್ಕಾರ ಜಿಡಿಪಿಯ ಶೇ.53 ರಷ್ಟು ಸಾಲ ಮಾಡಿದೆ. ರಾಜ್ಯ ಸರ್ಕಾರ ವಿತ್ತೀಯ ಹೊಣೆಗಾರಿಕೆ ನೀತಿಯಡಿ ಶೇ.25 ಕ್ಕಿಂತ ಕಡಿಮೆ ಸಾಲ ಮಾಡಿದೆ. ಹಾಗಿದ್ದರೂ ರಾಜ್ಯ ಸರ್ಕಾರ ಸಾಲ ಮಾಡಿದೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆಯುತ್ತಿದ್ದಾರೆ. ರಾಜ್ಯ ಸರ್ಕಾರ ಸಾಲ ಮಾಡಲೂ ಬಿಜೆಪಿಯವರೇ ಹೊಣೆ ಎಂದಿದ್ದಾರೆ.

ರಾಜ್ಯದಿಂದ ಕೇಂದ್ರವು 4.5 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹಿಸುತ್ತದೆ. ಆದರೆ ರಾಜ್ಯಕ್ಕೆ ಕೇವಲ 51 ಸಾವಿರ ಕೋಟಿ ರೂ. ತೆರಿಗೆ ಪಾಲು ನೀಡುತ್ತದೆ. ಅನುದಾನ ಮಾರ್ಗದಲ್ಲಿ 16 ಸಾವಿರ ಕೋಟಿ ರೂ. ನೀಡುತ್ತಿದೆ. ಕೇಂದ್ರದ ಅನ್ಯಾಯಗಳಿಂದಲೇ ರಾಜ್ಯದಲ್ಲಿ ಖೋತಾ ಬಜೆಟ್ ಮಂಡಿಸುವಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments