Publish Date: Mon, 28 Oct 2019 (14:01 IST)
Updated Date: Mon, 28 Oct 2019 (14:03 IST)
ಕೊಪ್ಪಳ : ತಮ್ಮ ವಿರುದ್ಧ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿಗೆ ಮಾಜಿ ಸಚಿವ ಶಿವರಾಜ್ ತಂಗಡಗಿ ಟಾಂಗ್ ನೀಡಿದ್ದಾರೆ.
ಇತ್ತೀಚೆಗಷ್ಟೇ ಡಿಸಿಎಂ ಲಕ್ಷ್ಮಣ ಸವದಿ, ತಂಗಡಗಿ ಚುನಾವಣೆಯಲ್ಲಿ ಸೋತ ನಂತರ ತನ್ನ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಅವರಿಗೆ ಮೋದಿಯನ್ನು ಬೈದರೆ ಪ್ರಚಾರ ಸಿಗುತ್ತದೆ. ಹಾಗಾಗಿ ಮೋದಿಯನ್ನು ಬೈದು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದ್ದರು.
ಇದಕ್ಕೆ ತಿರುಗೇಟು ನೀಡಿದ ಶಿವರಾಜ್ ತಂಗಡಗಿ, ಲಕ್ಷ್ಮಣ ಸವದಿ ಒಂದು ಸಾರಿ ಸೋತಿದ್ದಕ್ಕೆ ಉಪಮುಖ್ಯಮಂತ್ರಿ ಆಗಿದ್ದಾರೆ, ಇನ್ನೊಂದು ಬಾರಿ ಸೋತ್ರೆ ಈ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ವ್ಯಂಗ್ಯ ಮಾಡಿದ್ದಾರೆ.