ಮೋದಿ ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಬೇಕು: ಸಚಿವ ಶಿವರಾಜ್ ತಂಗಡಗಿ

Krishnaveni K
ಸೋಮವಾರ, 25 ಮಾರ್ಚ್ 2024 (09:50 IST)
Photo Courtesy: Twitter
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎನ್ನುವ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿವಾದ ಸೃಷ್ಟಿಸಿದ್ದಾರೆ.

ಕೊಪ್ಪಳದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವ ತಂಗಡಗಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದಿದ್ದಾರೆ. ಅವರ ಈ ಹೇಳಿಕೆ ವೈರಲ್ ಆಗಿದೆ.

ಮೋದಿ ಸರ್ಕಾರ ವರ್ಷಕ್ಕೆ ಲಕ್ಷ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು. ಕೊನೆಗೆ ಉದ್ಯೋಗ ಕೊಡಿ ಎಂದರೆ ಪಕೋಡ ಮಾರಿ ಎನ್ನುತ್ತಿದ್ದಾರೆ. ಹತ್ತು ವರ್ಷದಲ್ಲಿ 20 ಕೋಟಿ ಯುವಕರಿಗೆ ಉದ್ಯೋಗ ಸಿಗಬೇಕಿತ್ತು. ಆದರೆ ಮೋದಿ ಸರ್ಕಾರದಿಂದ ಅದು ಸಾಧ್ಯವಾಗಿಲ್ಲ. ನೀಡಿದ ಭರವಸೆ ಈಡೇರಿಸದ ಕಾರಣ ಇನ್ನು, ವಿದ್ಯಾರ್ಥಿಗಳು, ಯುವಕರು ಮೋದಿ ಮೋದಿ ಎಂದು ಕೂಗಿದರೆ  ಅವರ ಕಪಾಳಕ್ಕೆ ಹೊಡೆಯಬೇಕು ಎಂದಿದ್ದಾರೆ.

ಮತ್ತೊಮ್ಮೆ ಲೋಕಸಭೆ ಚುನಾವಣೆ ಬಂದಿದೆ. ಬಿಜೆಪಿಯವರು ಮತ್ತೆ ಸುಳ್ಳು ಹೇಳಿಕೊಂಡು ಮತ ಕೇಳಲು ಬರುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ನಾವು ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಘೋಷಿಸಿದ್ದೆವು. ಅದನ್ನು ಪೂರೈಸಿ ನುಡಿದಂತೆ ನಡೆದಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಭಾರತದ ಅಕ್ಕಿಗೆ ಟ್ರಂಪ್ ಸುಂಕ: ನಮ್ಮದೇಶದ ಬಡವರಿಗೆ ಕೊಡ್ತೀವಿ ಬಿಡ್ರೀ ಎಂದ ಪಬ್ಲಿಕ್

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಗೃಹಲಕ್ಷ್ಮಿ ಹಣ ಯಾಕೆ ಬಂದಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೇಳಿದಾಗ ಸದನದಲ್ಲಿ ಗ್ಗದಲವೋ ಗದ್ದಲ

ಮುಂದಿನ ಸುದ್ದಿ
Show comments