Select Your Language

Notifications

webdunia
webdunia
webdunia
webdunia

ಮುಂದಿನ ಜನ್ಮದಲ್ಲಿ ಮುಸ್ಲಿಮನಾಗುತ್ತೇನೆ ಎಂದಿದ್ದ ದೇವೇಗೌಡರನ್ನು ಬಿಜೆಪಿ ಒಪ್ಪಿಕೊಂಡಿದೆ: ತಂಗಡಗಿ

Shivaraj Thangadagi

Krishnaveni K

ಬೆಂಗಳೂರು , ಸೋಮವಾರ, 15 ಸೆಪ್ಟಂಬರ್ 2025 (16:42 IST)
ಬೆಂಗಳೂರು: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ ಎಂದಿದ್ದ ದೇವೇಗೌಡರನ್ನು ಬಿಜೆಪಿ ಯಾಕೆ ಒಪ್ಪಿಕೊಂಡಿದೆ ಎಂದು ಸಚಿವ ಶಿವರಾಜ್ ತಂಗಡಗಿ ಪ್ರಶ್ನೆ ಮಾಡಿದ್ದಾರೆ.

ಬಾನು ಮುಷ್ತಾಕ್ ಮುಸ್ಲಿಂ ಧರ್ಮೀಯರು. ಈ ಕಾರಣಕ್ಕೆ ಹಿಂದೂ ಆರಾಧ್ಯ ದೇವತೆ ಚಾಮುಂಡಿ ತಾಯಿಯ ಉತ್ಸವಕ್ಕೆ ಅವರು ಬರಬಾರದು ಎನ್ನುತ್ತಿರುವ ಬಿಜೆಪಿ ನಾಯಕರಿಗೆ ಸಚಿವ ತಂಗಡಗಿ ಈ ರೀತಿ ಟಾಂಗ್ ಕೊಟ್ಟಿದ್ದಾರೆ.

ಮೈಸೂರು ದಸರಾ ಉದ್ಘಾಟನೆ ಮಾಡಲು ಬಾನು ಮುಷ್ತಾಕ್ ರನ್ನು ಆಯ್ಕೆ ಮಾಡಿರುವುದರ ವಿರುದ್ಧ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಮನವಿ ಸಲ್ಲಿಸಿ ಹಿನ್ನಡೆ ಅನುಭವಿಸಿರುವುದರ ಬಗ್ಗೆಯೂ ಅವರು ವ್ಯಂಗ್ಯ ಮಾಡಿದ್ದಾರೆ.

ಪ್ರತಾಪ್ ಸಿಂಹಗೆ ಬಿಜೆಪಿಯವರೇ ಟಿಕೆಟ್ ಕೊಟ್ಟಿಲ್ಲ. ಅಂದರೆ ಅವರ ಯೋಗ್ಯತೆ ಎನೆಂದು ಗೊತ್ತಾಗುತ್ತದೆ. ಮೈಸೂರು ದಸರಾಗೆ ಎಲ್ಲಾ ಸಮುದಾಯದವರೂ ಬರುತ್ತಾರೆ. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದ ದೇವೇಗೌಡರನ್ನು ಬಿಜೆಪಿ ಯಾಕೆ ಒಪ್ಪಿಕೊಂಡಿದೆ ಎಂದು ಪ್ರಶ್ನೆ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೋರ್ಟ್‌ನಲ್ಲಿ ಹಿನ್ನಡೆಯಾದ ಪ್ರತಾಪ್ ಸಿಂಹಗೆ ಗುಮ್ಮಿದ ಸಿಎಂ ಸಿದ್ದರಾಮಯ್ಯ