Publish Date: Sat, 08 Mar 2025 (18:41 IST)
Updated Date: Sat, 08 Mar 2025 (18:43 IST)
ಬೆಂಗಳೂರು: ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸಿ ಬೆಳೆಸಲು ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಂಡ ನಿರ್ಧಾರಗಳಿಗೆ ನಟ ಶಿವರಾಜ್‌ಕುಮಾರ್ ಅವರು ಧನ್ಯವಾದ ತಿಳಿಸಿ ಪೋಸ್ಟ್ ಹಾಕಿದ್ದಾರೆ.
ನಿನ್ನೆ ಸಿಎಂ ಸಿದ್ದರಾಮಯ್ಯ ಮಂಡಿಸಿದ 16ನೇ ಬಜೆಟ್‌ನಲ್ಲಿ ಸಿನಿಮಾ ರಂಗಕ್ಕೆ ಹಲವು ಅನುದಾನವನ್ನು ನೀಡಿದ್ದಾರೆ. ಈ ಬಗ್ಗೆ ಖುಷಿ ವ್ಯಕ್ತ ಪಡಿಸಿ, ಶಿವರಾಜ್‌ಕುಮಾರ್ ಅವರು ಪೋಸ್ಟ್‌ನಲ್ಲಿ ಬರೆದಿದ್ದಾರೆ.
ಶಿವರಾಜ್‌ಕುಮಾರ್ ಹಂಚಿಕೊಮಡ ಪೋಸ್ಟ್‌ನಲ್ಲಿ ಹೀಗಿದೆ:
ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸಿ ಬೆಳೆಸಲು ತೆಗೆದುಕೊಂಡ ನಿರ್ಧಾರಗಳಿಗೆ ಕರ್ನಾಟಕ ಸರ್ಕಾರಕ್ಕೆ ನನ್ನ ಅಭಿನಂಂದನೆಗಳು. ಚಿತ್ರಮಂದಿರಗಳಲ್ಲಿ ಟಿಕೆಟ್ ದರ ಇಳಿಕೆ, ಕನ್ನಡ ಸಿನಿಮಾಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ತಲುಪಿಸಲು ರಾಜ್ಯ ಸರ್ಕಾರದಿಂದ ಹೊಸ ಓಟಿಟಿ, ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲಂ ಸಿಟಿ ನಿರ್ಮಾಣಕ್ಕೆ ಬೆಂಬಲ ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ ನನ್ನ ಹಾಗೂ ಚಿತ್ರರಂಗದ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು.
ಶೀಘ್ರವೇ ಈ ಎಲ್ಲಾ ಯೋಜನೆಗಳಿಗೆ ಚಾಲನೆ ಸಿಗಲಿ ಎಂದು ಆಶಿಸುತ್ತೇನೆ ಎಂದು ಡಾ.ಶಿವರಾಜ್‌ಕುಮಾರ್ ಅವರು ಬರೆದುಕೊಂಡಿದ್ದಾರೆ.