Select Your Language

Notifications

webdunia
webdunia
webdunia
webdunia

ದಸರಾ ಮಾದರಿಯಲ್ಲಿ ಗಿರಿಧಾಮದಲ್ಲಿ ಶಿವೋತ್ಸವ: ಸುಧಾಕರ್

ದಸರಾ ಮಾದರಿಯಲ್ಲಿ ಗಿರಿಧಾಮದಲ್ಲಿ ಶಿವೋತ್ಸವ: ಸುಧಾಕರ್
ಚಿಕ್ಕಬಳ್ಳಾಪುರ , ಭಾನುವಾರ, 27 ಫೆಬ್ರವರಿ 2022 (09:35 IST)
ಚಿಕ್ಕಬಳ್ಳಾಪುರ : ಸಾವಿರ ವರ್ಷಗಳ ಇತಿಹಾಸ ಹೊಂದಿರುವ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದಲ್ಲಿ ಈ ವರ್ಷದಿಂದ ಮೈಸೂರು ದಸರಾ ರೀತಿಯಲ್ಲೇ ಶಿವೋತ್ಸವ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಒಂದು ರಾಜ್ಯ ಹಲವು ಜಗತ್ತು ಎಂದು ಬಣ್ಣಿಸಲಾಗುತ್ತಿದೆ. ಅದೇ ರೀತಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯೂ ಒಂದು ಜಿಲ್ಲೆ, ಹಲವು ಜಗತ್ತು.

ಪ್ರವಾಸಿ ತಾಣ, ದೇವಾಲಯ, ನದಿ, ಸರೋವರಗಳ ಜೊತೆ ಐತಿಹಾಸಿಕ ಸ್ಥಳಗಳು ಕೂಡ ಚಿಕ್ಕಬಳ್ಳಾಪುರದಲ್ಲಿವೆ. ನಂದಿ ಬೆಟ್ಟದಲ್ಲಿರುವ ಭೋಗನಂದೀಶ್ವರ ದೇವಸ್ಥಾನ ತನ್ನದೇ ಆದ ವಿಶಿಷ್ಠ ಪ್ರಾಮುಖ್ಯತೆ ಪಡೆದಿದೆ ಎಂದು ಹೇಳಿದರು. 

ಈ ಬಾರಿಯ ಶಿವೋತ್ಸವಕ್ಕೆ ಥಾವರ್ ಚಾಂದ್ ಗೆಹ್ಲೋಟ್, ಚಾಲನೆ ಕೊಡಲಿದ್ದಾರೆ. ಮುಖ್ಯಮಂತ್ರಿಗಳಿಗೆ ಕೂಡ ಆಹ್ವಾನ ನೀಡಲಾಗಿದೆ. ಅನೇಕ ಸಂತರು, ಗುರುಗಳು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಸಿರಿಗೆರೆಯ ಮಹಾಸ್ವಾಮಿಗಳು, ಸತ್ಯ ಸಾಯಿ ಸಂಸ್ಥೆಯ ಮಧುಸೂದನ್ ಗುರುಗಳು ಕೂಡ ಶಿವೋತ್ಸವಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು. 

ಮಾರ್ಚ 1ರ ಸಂಜೆ 6 ಗಂಟೆಗೆ ಆರಂಭವಾಗಿ, ಬೆಳಗ್ಗೆ ರಥೋತ್ಸವ ನಡೆಯುವ ತನಕ ನಿರಂತರವಾಗಿ ಸಾಂಸ್ಕೃತಿಕ, ಭಕ್ತಿ ಹಾಗೂ ಜಾಗರಣೆ ಕಾರ್ಯಕ್ರಮಗಳು ನಡೆಯಲಿವೆ. ರಾಷ್ಟ್ರೀಯ ಮಟ್ಟದ ಸಂಗೀತ, ನಾಟ್ಯ ಕಲಾವಿದರು, ಚಿತ್ರ ತಾರೆಯರು ಕೂಡ ಇದರಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 25 ಹೆಸರಾಂತ ವಿವಿಧ ತಂಡಗಳು ಭಾಗವಹಿಸಲಿವೆ.

ನಗೆ ಹಬ್ಬ ಕೂಡ ಇರಲಿದೆ. ಜಾನಪದ ಕಲೆಗಳು, ಭರತ ನಾಟ್ಯ ಕೂಡ ಆಕರ್ಷಣೆಯಾಗಿರಲಿದೆ. ಮಧ್ಯಾಹ್ನ 1 ಗಂಟೆಯಿಂದ ಹಿಡಿದು, ಮುಂದಿನ ದಿನ ರಥೋತ್ಸವ ಆಗುವ ತನಕ ನಿರಂತರ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಆನ್‍ಲೈನ್ ನಲ್ಲಿ ಜನರಿಗೆ ವಂಚನೆ!