Publish Date: Tue, 03 Oct 2023 (19:33 IST)
Updated Date: Tue, 03 Oct 2023 (19:52 IST)
ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಹಲ್ಲು ತೂರಾಟ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ, ಆಡಳಿತ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಉಡಾಫೆ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ ವಿರುದ್ಧವೂ ಗುಡುಗುತ್ತಿದ್ದಾರೆ. ಇದರ ಬೆನ್ನಲ್ಲೇ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ , ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.