Publish Date: Tue, 17 Sep 2024 (17:31 IST)
Updated Date: Tue, 17 Sep 2024 (17:34 IST)
ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಅವರು 74ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರಧಾನಿಗೆ ಗಣ್ಯರಿಂದ ಶುಭಾಶಯಗಳ ಸುರಿಮಳೆ ಹರಿದಿದೆ.
ಇನ್ನೂ ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿ ಜನ್ಮದಿನವನ್ನು ಹಬ್ಬದಂತೆ ಸಂಭ್ರಮಿಸಿದ್ದಾರೆ. ಮೋದಿ ಅವರ ಜನ್ಮದಿನದ ಪ್ರಯುಕ್ತ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದ ಹತ್ತಿರ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಇಂದು ಮಹಿಳಾ ಮೋರ್ಚಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರು ಪೊರಕೆ ಹಿಡಿದು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು. ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಕು. ಸಿ. ಮಂಜುಳಾ, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.