ಮೈಸೂರು: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಜವಾಬ್ದಾರಿಯುತವಾಗಿ ಮಾತನಾಡಬೇಕು. ಕೀಳು ಮಟ್ಟದ ಹೇಳಿಕೆ ನೀಡುವುದು ಅವರ ಘನತೆಗೆ ತಕ್ಕದ್ದಲ್ಲ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೋಭಾ ಕರಂದ್ಲಾಜೆ ಅವರು ಪುಟವಿಟ್ಟ ಚಿನ್ನವಿದ್ದಂತೆ. ಒಬ್ಬ ಹೆಣ್ಣುಮಗಳ ಬಗ್ಗೆ ಕೆಟ್ಟದಾಗಿ ಮಾತನಾಡುವುದರಿಂದ ಅವರ ಕೀಳು ಮಟ್ಟದ ಭಾವನೆಯನ್ನು ತೋರಿಸುತ್ತದೆ. ಸುರೇಶ್ ತನ್ನ ತಪ್ಪು ಮುಚ್ಚಿಕೊಳ್ಳಲು ಇನ್ನೊಬ್ಬರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಕಾಂಗ್ರೆಸ್ಗೆ ಸೇರ್ಪಡೆಯಾದ ಸಿಪಿ ಯೋಗೇಶ್ವರ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚನ್ನಪ್ಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಯೋಗೇಶ್ವರ್ ಆತುರದ ನಿರ್ಧಾರ ಮಾಡಿದ್ದಾರೆ ಎಂದರು.