ಕಾಂಗ್ರೆಸ್ ಪರ ಪ್ರಚಾರ ಮಾಡಿದಕ್ಕೆ ದರ್ಶನ್‌ಗೆ ಶಾಮಿಯಾನ ಹಾಕಿ ರಕ್ಷಣೆ: ಶೋಭಾ ಕರಂದ್ಲಾಜೆ ಆಕ್ರೋಶ

sampriya
ಶುಕ್ರವಾರ, 14 ಜೂನ್ 2024 (18:16 IST)
Photo By X
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಟ ದರ್ಶನ್‌ ಅವರು ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಕ್ಕೆ ಇಂದು ಅವರಿರುವ ಠಾಣೆಗೆ ಶಾಮಿಯಾನ ಹಾಕಿ ರಕ್ಷಣೆ ನೀಡಲಾಗುತ್ತಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಅವರು ದೂರಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ಅಪರಾಧ ಪ್ರಕರಣಗಳು ಜಾಸ್ತಿಯಾಗುತ್ತಲೇ ಇವೆ. ಅದಲ್ಲದೆ ಕಾಂಗ್ರೆಸ್‌ ಕೊಲೆಗಾರರಿಗೆ ರಕ್ಷಣೆ ನೀಡುತ್ತಿದೆ. ಇನ್ನೂ ದರ್ಶನ್‌ ಅವರು ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಕ್ಕೆ ಇಂದು ಅವರು ತನಿಖೆ ಎದುರಿಸುತ್ತಿರುವ ಠಾಣೆಗೆ ಶಾಮಿಯಾನ ಹಾಕಿ ರಕ್ಷಣೆ ನೀಡಲಾಗುತ್ತಿದೆ ಎಂದರು.

ಇಂದು ಜನರಿಗೊಂದು ಕಾನೂನು, ದೊಡ್ಡವರಿಗೊಂದು ಕಾನೂನು, ಕಾಂಗ್ರೆಸ್ ಕಾರ್ಯಕರ್ತರಿಗೊಂದು ಕಾನೂನು ಎಂಬ ಸಂದೇಶವನ್ನು ಕಾಂಗ್ರೆಸ್ ಸರ್ಕಾರ ರವಾನಿಸಿದೆ . ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ವಹಿಸಲಿ. ಕೊಲೆಗಡುಕರ ರಕ್ಷಣೆಯನ್ನು ಸರ್ಕಾರ, ಪೊಲೀಸರು ಮಾಡಬಾರದು ಎಂದು ಶೋಭಾ ಹೇಳಿದರು.

ಇನ್ನೂ ಬಿಎಸ್‌ ಯಡಿಯೂರಪ್ಪ ಅವರು ಎದುರಿಸುತ್ತಿರುವ ಪೋಕ್ಸೋ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಸರಿಯಾದ ಮಾಹಿತಿಯಿಲ್ಲ. ಮಾಧ್ಯಮದ ಮೂಲಕ ಅಷ್ಟೇ ನೋಡಿದ್ದೇನೆ. ಯಡಿಯೂರಪ್ಪ ಅವರ ಸುದೀರ್ಘವಾದ ರಾಜಕಾರಣ ನೋಡಿದ್ದೇನೆ. ಇದರಲ್ಲಿ ಸರ್ಕಾರದ ಪಾತ್ರದ ಬಗ್ಗೆ ಗೊತ್ತಿಲ್ಲ. ನ್ಯಾಯಾಲಯ ನೆಲದ ಕಾನೂನು ಎತ್ತಿ ಹಿಡಿಯಲಿದೆ. ಯಡಿಯೂರಪ್ಪ ವಿರುದ್ಧದ ಪ್ರಕರಣ ಜನ ಗಮನಿಸುತ್ತಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಕನ ಕನಸಿನಿಂದ ಮೊದಲು ಹೊರಬನ್ನಿ: ಪ್ರಿಯಾಂಕ್‌ ಖರ್ಗೆಗೆ ಸಿ.ಟಿ.ರವಿ ಟಾಂಗ್‌

ಯುವತಿ ಮೇಲೆ ಗ್ಯಾಂಗ್‌ರೇಪ್‌ ಬೆನ್ನಲ್ಲೇ ಮಹಿಳೆಯರ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಾಕಿಸ್ತಾನ ಮೇಲೆ ಮುಗಿಬಿದ್ದ ಅಫ್ಗನ್: ಗುಂಡಿನ ಕಾಳಗದಲ್ಲಿ 58 ಸೈನಿಕರ ಹತ್ಯೆ

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಲು ಸಚಿವ ಪ್ರಿಯಾಂಕ್‌ ಖರ್ಗೆ ಒತ್ತಾಯ

ಆರ್‌ಎಸ್‌ಎಸ್‌ ಸಮವಸ್ತ್ರದಲ್ಲೇ ಧರಣಿ ಕುಳಿತ ಶಾಸಕ ಮುನಿರತ್ನ: ತಿರುಗೇಟು ನೀಡಿದ ಡಿಕೆಶಿ

ಮುಂದಿನ ಸುದ್ದಿ
Show comments