Publish Date: Tue, 13 Mar 2018 (13:43 IST)
Updated Date: Tue, 13 Mar 2018 (13:45 IST)
ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬವರ ಮೇಲೆ ಹಲ್ಲೆ ಮಾಡಿ ಜೈಲು ಸೇರಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ರನ್ನು ರಕ್ಷಿಸಲು ಅಧಿಕಾರಿಗಳನ್ನು ಬಲಿಗೊಡಲಾಗುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಉಶಾಸಕರ ಪುತ್ರನನ್ನು ರಕ್ಷಿಸಲು ವವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ. ಇದಕ್ಕಾಗಿ ಕೆಲವು ಪ್ರಾಮಾಣಿಕ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಇದಕ್ಕೆ ಹ್ಯಾರಿಸ್ ಕುಮ್ಮಕ್ಕು ಇದೆ ಎಂದಿದ್ದಾರೆ.
ಅಷ್ಟೇ ಅಲ್ಲದೆ ಇದಕ್ಕೆಲ್ಲಾ ಗೃಹ ಸಚಿವರು, ಅವರ ಸಲಹೆಗಾರ ಕೆಂಪಯ್ಯ ಒತ್ತಡ ಹಾಕಿದ್ದಾರೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ಹೇಳಲಿ ನೋಡೋಣ ಎಂದು ಶೋಭಾ ಸವಾಲು ಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ