Publish Date: Mon, 20 Apr 2026 (13:35 IST)
Updated Date: Mon, 20 Apr 2026 (13:38 IST)
ಬೆಂಗಳೂರು: ಬಿಟ್ ಕಾಯಿನ್ ಮೂಲಕ ಬೇರೆ ಬೇರೆ ದೇಶಗಳಲ್ಲಿ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ. ವಿಶೇಷವಾಗಿ ಕಾಂಗ್ರೆಸ್ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು.
ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎನ್.ಎ. ಹ್ಯಾರಿಸ್ ಅವರ ಮನೆ ಮೇಲೆ ಇಡಿ ದಾಳಿ ಕುರಿತು ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಇವರು, ನಿರಂತರವಾಗಿ ಕಾಂಗ್ರೆಸ್ ಆರ್ಥಿಕ ಅಪರಾಧಗಳನ್ನು ಮಾಡುತ್ತಲೇ ಬರುತ್ತಿದೆ. ಇದರಲ್ಲಿ ಬಿಟ್ ಕಾಯಿನ್ ಸಹ ಒಂದು. ಬಿಟ್ ಕಾಯಿನ್ ನಲ್ಲಿ ಹೂಡಿಕೆ ಆಗಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆದಿದೆ ಎಂದರು.
ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಯಾವುದೇ ನಿಖರ ಮಾಹಿತಿ ಇಲ್ಲದೆ ದಾಳಿ ನಡೆದಿಲ್ಲ. ಎಲ್ಲದರಲ್ಲೂ ಕಾಂಗ್ರೆಸ್ ನವರು ತಪ್ಪಿಸಿಕೊಳ್ತಾರೆ. ರಾಜ್ಯದಲ್ಲಿನ ಹಣವನ್ನು ಲೂಟಿ ಮಾಡಿ ಬೇರೆ ದೇಶಗಳಿಗೆ ಸಾಗಿಸಿ, ಅಲ್ಲಿ ಹೂಡಿಕೆ ಮಾಡ್ತಾರೆ. ಕಾಂಗ್ರಸ್ ಸರ್ಕಾರ ಭ್ರಷ್ಟ ಸರ್ಕಾರ ಎಂದರು.
ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮನೆ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಜೊತೆ ವಹಿವಾಟು ನಡೆಸಿರುವ ಹಿನ್ನಲೆಯಲ್ಲಿ ದಾಳಿ ನಡೆದಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ