ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಸಚಿವ ಸಂಪುಟ ರಚನೆಯನ್ನು ಮುಂದೂಡಿಕೆ ಮಾಡಲಾಗಿದೆ ಅಂತ ಬಿಜೆಪಿ ಸಂಸದೆ ಹೇಳಿದ್ದಾರೆ. 
									
										
								
																	ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಸಂತ್ರಸ್ಥರ ಸಮಸ್ಯೆ ಬಗೆಹರಿಸೋದಕ್ಕೆ ಆದ್ಯತೆ ನೀಡಲಾಗಿದೆ ಎಂದ್ರು. 
									
			
			 
 			
 
 			
					
			        							
								
																	ಪ್ರವಾಹ ಇಳಿಮುಖಗೊಂಡು ನೆರೆ ಸಮಸ್ಯೆ ಪರಿಹಾರವಾದ ಮೇಲೆ ಪಕ್ಷದ ಮುಖಂಡರೊಂದಿಗೆ ಚರ್ಚೆ ಮಾಡಿ ಸಂಪುಟ ರಚನೆ ಮಾಡಲಾಗುತ್ತದೆ ಎಂದ್ರು. 
									
										
								
																	ಅಧಿಕಾರ ಕಳೆದುಕೊಂಡಿರೋ ಕುಮಾರಸ್ವಾಮಿ ಸಿಟ್ಟಿನಲ್ಲಿದ್ದಾರೆ. ಹೀಗಾಗಿ ಯಡಿಯೂರಪ್ಪ ಎಲ್ಲಿದ್ದೀಯಪ್ಪಾ ಅಂತ ಕೇಳ್ತಿದ್ದಾರೆ ಅಂತ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ರು.