Select Your Language

Notifications

webdunia
webdunia
webdunia
webdunia

ದೇಶದ್ರೋಹ ಮಾಡಿದರೂ ಸಿದ್ದರಾಮಯ್ಯಗೆ ವೋಟ್ ಬ್ಯಾಂಕ್ ಮುಖ್ಯ: ಶೋಭಾ ಕರಂದ್ಲಾಜೆ

Shobha Karandlaje

Krishnaveni K

ಬೆಂಗಳೂರು , ಮಂಗಳವಾರ, 17 ಸೆಪ್ಟಂಬರ್ 2024 (13:36 IST)
Photo Credit: Facebook
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ ಆಗುತ್ತಿದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಕಳವಳ ವ್ಯಕ್ತಪಡಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ದೇಶದ್ರೋಹಿಗಳು ಮೇಲುಗೈ ಸಾಧಿಸುತ್ತಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಶಿಕ್ಷೆ ವಿಧಿಸಿಲ್ಲ. ದೇಶದ್ರೋಹಕ್ಕೆ ಕುಮ್ಮಕ್ಕು ಕೊಡುವ ಸರಕಾರ ಅಧಿಕಾರದಲ್ಲಿದೆ ಎಂದು ಟೀಕಿಸಿದರು.

ಬೆಂಗಳೂರು, ಮೈಸೂರು, ಕೊಡಗು, ಹಾಸನ, ಕೋಲಾರ, ನಾಗಮಂಗಲ ಸೇರಿ ಬೇರೆ ಬೇರೆ ಜಾಗಗಳಲ್ಲಿ ಇವತ್ತು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬರುತ್ತಿದೆ. ಪ್ಯಾಲೆಸ್ಟೀನ್ ಧ್ವಜ ಹಾರುತ್ತಿದೆ. ಆದರೆ, ರಾಜ್ಯ ಸರಕಾರ ಓಲೈಕೆ ರಾಜಕೀಯದಲ್ಲಿ ನಿರತವಾಗಿದೆ. ದೇಶದ್ರೋಹ ಮಾಡಿದರೂ ಅಡ್ಡಿ ಇಲ್ಲ; ನಮಗೆ ವೋಟ್ ಬ್ಯಾಂಕ್ ಬೇಕು ಎಂಬ ಮಾನಸಿಕತೆ ಇರುವ ಸಿದ್ದರಾಮಯ್ಯನವರಿಂದ ನಾವು ದೇಶಪ್ರೇಮ, ಕಾನೂನಿನ ಅನುಷ್ಠಾನ ನಿರೀಕ್ಷೆ ಮಾಡುವುದು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದರು.
 
ನಿನ್ನೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ ಘಟನೆ ಮತ್ತು ನಾಗಮಂಗಲದಲ್ಲಿ ನಡೆದ ಕೋಮುಗಲಭೆ ವಿಚಾರವಾಗಿ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಲೇ ಇದೆ. ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಂತಕ್ಕಾಗಿ ಸ್ವಲ್ಪ, ದೇಶಕ್ಕಾಗಿ ಸರ್ವಸ್ವ ಚಿಂತನೆ ಮೋದಿಯವರದು: ಶೋಭಾ ಕರಂದ್ಲಾಜೆ