Select Your Language

Notifications

webdunia
webdunia
webdunia
webdunia

ಸ್ವಾಭಿಮಾನವಿದ್ದರೆ ಶೋಭಾ ಕರಂದ್ಲಾಜೆ ರಾಜೀನಾಮೆ ನೀಡಲಿ ಎಂದ ಸಚಿವ ಖಾದರ್

ಸ್ವಾಭಿಮಾನವಿದ್ದರೆ ಶೋಭಾ ಕರಂದ್ಲಾಜೆ ರಾಜೀನಾಮೆ ನೀಡಲಿ ಎಂದ ಸಚಿವ ಖಾದರ್
ಚಿಕ್ಕಮಗಳೂರು , ಶುಕ್ರವಾರ, 29 ಡಿಸೆಂಬರ್ 2017 (18:29 IST)
ಸ್ವಾಭಿಮಾನವಿದ್ದರೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ರಾಜೀನಾಮೆ ನೀಡಲಿ ಎಂದು ಆಹಾರ ಮತ್ತು ನಾಗರಿಕ ಖಾತೆ ಸಚಿವ ಯು.ಟಿ ಖಾದರ್ ಸವಾಲು ಹಾಕಿದ್ದಾರೆ.
 
ಪ್ರಧಾನಮಂತ್ರಿ ಮುಂದೆ ಮಾತನಾಡುವ  ಧೈರ್ಯ ಬಿಜೆಪಿಯ ಸಂಸದರಲ್ಲಿ ಇಲ್ಲ. ಆದರೆ ಇಲ್ಲಸಲ್ಲದ ರಾಜಕೀಯ ಮಾತ್ರ ಮಾಡುತ್ತಾರೆ.  ಕನ್ನಡಿಗರಿಗೆ ಅನ್ಯಾಯವಾಗಿದೆ ಎಂದು ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಸಂಸದರು ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.
 
ಇಲ್ಲಿ ಮಾತನಾಡಿದಷ್ಟು ಶೋಭಾ ಕರಂದ್ಲಾಜೆ ಅವರು ಸಂಸತ್‌ನಲ್ಲಿ ಮಾತನಾಡಿದ್ದರೆ ಇಷ್ಟೊತ್ತಿಗೆ ಸಮಸ್ಯೆ ಬಗೆಹರಿಯುತ್ತಿತ್ತು. ಪ್ರಧಾನಮಂತ್ರಿ ಎರಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
 
ಬಿಜೆಪಿಯವರು ರಾಜ್ಯದ ಮುಖ್ಯಮಂತ್ರಿಯನ್ನು ಸಭೆಗೆ ಕರೆಯುವುದೂ ಇಲ್ಲ, ಟ್ರಿಬ್ಯೂನಲ್‌ಗೆ ಅಫಡವಿಟ್ ಕೂಡ ನೀಡದೇ ಕೇವಲ ರಾಜಕಾರಣ ಮಾಡುತ್ತಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ವಿರುದ್ಧ ಹೋರಾಟ ಮುಂದುವರೆಸುವೆ– ಜಿಗ್ನೇಶ್