Publish Date: Sat, 21 Sep 2019 (10:15 IST)
Updated Date: Sat, 21 Sep 2019 (10:17 IST)
ಪುತ್ತೂರು: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಶಂಕಿತ ಡೆಂಘೀ ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ವಿಶ್ರಾಂತಿಯಲ್ಲಿದ್ದಾರೆ.
ಸದ್ಯಕ್ಕೆ ತಮ್ಮ ತವರೂರು ಪುತ್ತೂರಿನ ನಿವಾಸದಲ್ಲಿರುವ ಶೋಭಾಗೆ ಡೆಂಘೀ ಜ್ವರದ ಲಕ್ಷಣ ಕಾಣಿಸಿಕೊಂಡಿದೆ. ಹೀಗಾಗಿ ತಕ್ಷಣವೇ ಅವರು ಸೂಕ್ತ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಎರಡು ಮೂರು ದಿನಗಳಿಂದ ತೀವ್ರ ಬಳಲಿಕೆ ಕಂಡುಬಂದಿರುವ ಹಿನ್ನಲೆಯಲ್ಲಿ ಇನ್ನು ಎರಡು ಮೂರು ದಿನಗಳ ಕಾಲ ಅವರು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಸದ್ಯಕ್ಕೆ ರಾಜಕೀಯ ಚಟುವಟಿಕೆಗಳಿಂದ ದೂರವಿರಲಿದ್ದಾರೆ ಎನ್ನಲಾಗಿದೆ.