Publish Date: Tue, 21 Nov 2017 (14:45 IST)
Updated Date: Tue, 21 Nov 2017 (14:47 IST)
ಯಥಾ ರಾಜಾ ತಥಾ ಪ್ರಜಾ ಎನ್ನುವಂತಹ ಸ್ಥಿತಿ ಸಿಎಂ ಸಿದ್ದರಾಮಯ್ಯ ಅವರದ್ದಾಗಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ್‌ದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಜಾತಿ, ಧರ್ಮವನ್ನು ಒಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಆದರೆ, ಇಂತಹ ತಂತ್ರಗಳಿಗೆ ಜನತೆ ಮಾರುಹೋಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯ. ಸರಕಾರದ ಮುಖ್ಯ ಕಾರ್ಯದರ್ಶಿ ಕಮಿಶನ್ ಏಜೆಂಟ್ ಎಂದು ವಾಗ್ದಾಳಿ ನಡೆಸಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.
ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಎಚ್ಚರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.