Publish Date: Tue, 19 Sep 2017 (14:59 IST)
Updated Date: Tue, 19 Sep 2017 (15:01 IST)
ಕೇಂದ್ರ ಸರಕಾರ ರಾಜ್ಯದ ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎನ್ನುವ ಆರೋಪ ನಿರಾಧಾರವಾಗಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನಿರಾಧಾರ ಆರೋಪಗಳನ್ನು ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ದಾಖಲೆ ಸಹಿತ ಆರೋಪ ಮಾಡಲಿ ಎಂದು ಗೃಹಸಚಿವ ರಾಮಲಿಂಗಾರೆಡ್ಡಿಗೆ ಸವಾಲ್ ಹಾಕಿದ್ದಾರೆ.
ಕೇಂದ್ರ ಸರಕಾರ ರಾಜ್ಯದ 35 ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಮಾಡಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯ ಸರಕಾರ ಬಿಜೆಪಿ ಮುಖಂಡರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಕೂಡಾ ನಿನ್ನೆ ಆರೋಪಿಸಿರುವುದನ್ನು ಸ್ಮರಿಸಬಹುದು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.