Webdunia - Bharat's app for daily news and videos

Install App

ತನ್ನ ವಿರುದ್ಧ ಮಸಲತ್ತು ಮಾಡಿದ್ದ ಸಿಟಿ ರವಿಗೆ ಟಿಕೆಟ್ ಕೊಡದಿದ್ದಕ್ಕೆ ಶೋಭಾ ಕರಂದ್ಲಾಜೆ ಫುಲ್ ಖುಷಿ

Sampriya
ಗುರುವಾರ, 14 ಮಾರ್ಚ್ 2024 (12:25 IST)
Photo Courtesy: Twitter
ಬೆಂಗಳೂರು: ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರದಿಂದ ಟಿಕೆಟ್ ಸಿಕ್ಕ ಬೆನ್ನಲ್ಲೇ ಉಡುಪಿ- ಚಿಕ್ಕಮಗಳೂರು ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಇಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. 
 
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವ ಬಗ್ಗೆ ವಿಶ್ವಾಸವಿತ್ತು. ದೆಹಲಿ ನಾಯಕರು ಯಾವ ಜವಾಬ್ದಾರಿ ನನಗೆ ನೀಡಿದರು ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಯಾವುದೇ ರಾಜ್ಯದ ಚುನಾವಣೆ ಆಗಲಿ, ಯಾವುದೇ ಇಲಾಖೆ ಆಗಲಿ ಅಲ್ಲೆಲ್ಲ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದು, ಈ ಕಾರಣಕ್ಕೆ ನನಗೆ ಮತ್ತೇ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ ಎಂದರು. 
 
ಸಿ.ಟಿ.ರವಿ   ವಿರುದ್ಧ ಪರೋಕ್ಷ ಟಾಂಗ್ ನೀಡಿ ಮಾತನಾಡಿದ ಶೋಭಾ, ನನ್ನ ಕಾಲಾವಧಿಯಲ್ಲಿ ಉಡುಪಿ-ಚಿಕ್ಕಮಗಳೂರಿನಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಾಗಿವೇ. ಆದರೆ ಅದನ್ನು ಪರಿಗಣಿಸದೇ ನನಗೆ ಕೆಲವರು ವಿರೋಧ ಮಾಡಿದ್ದರು.  ಟಿಕೆಟ್‌ಗಾಗಿ ಏನೇನೂ ಕಸರತ್ತನ್ನು ಮಾಡಿದರು ಅವರು ಯಶಸ್ವಿಯಾಗಿಲ್ಲ. ಇದೀಗ ಅವರಿಂದಲೂ ಟಿಕೆಟ್ ತಗೊಂಡು ಬರೋಕೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು. 
 
ಬಿಜೆಪಿಯಲ್ಲಿ ಪಕ್ಷ ವಿರೋಧಿ, ಗಲಭೆ, ಅವಮಾನ ಮಾಡಿದವರಿಗೆ ಟಿಕೆಟ್ ಸಿಗಲ್ಲ. ಇನ್ನೂ ಮುಂದೆಯಾದ್ರು ಅವರು ಪಾಠ ಕಲಿಯಲಿ. ಬಿಜೆಪಿ ಒಂದು ಶಿಸ್ತಿನ ಪಕ್ಷ.  ಪಕ್ಷಕ್ಕೆ ಅವಮಾನ ಮಾಡಿದರೆ ಮಣೆ ಹಾಕಲ್ಲ ಎಂಬುದು ಸಾಬೀತಾಗಿದೆ. ಈ ಬೆಳವಣಿಗೆಯಿಂದ ನನಗೆ ತುಂಬಾ ಸಂತೋಷವಾಗಿದೆ. ಬೆಂಗಳೂರಲ್ಲಿ ಶಾಸಕರಾಗಿ ಅಭಿವೃದ್ಧಿ ಕಾರ್ಯ ಮಾಡಿದ್ದು, ಇದೀಗ ನನಗೆ ಎಲ್ಲರ ಆಶೀರ್ವಾದ ಬೇಕಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments