ಸಿಎಂ ಸಿದ್ದರಾಮಯ್ಯ ಕೈಗೆ ರಕ್ತ ಅಂಟಿಕೊಂಡಿದೆ. ನೀವು ಯಾಕೆ ಜಾತಿರಾಜಕಾರಣ ಮಾಡುತ್ತಿದ್ದೀರಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಹಿಂದುಗಳಿಗೊಂದು ಕಾನೂನು ಮುಸ್ಲಿಮರಿಗೊಂದು ಕಾನೂನು ನ್ಯಾಯವೇ ಎಂದು ಪ್ರಶ್ನಿಸಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಫ್‌ಡಿ ಮತ್ತು ಎಸ್‌ಡಿಪಿಐ ಸಂಘಟನೆಗಳು ಹಿಂದುಗಳ ವಿರುದ್ಧ ದ್ವೇಷ ಸಾಧಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಯಾಗಿದ್ದಾಗ ಬಿಜೆಪಿ ನಾಯಕರ ಮೇಲೆ ಕೇಸ್‌ಗಳನ್ನು ಹಾಕುತ್ತೀರಾ, ಸಿಎಂ ಸಿದ್ದರಾಮಯ್ಯ ಕೂಡಾ ಮಂಗಳೂರಿಗೆ ಆಗಮಿಸಿದ್ದರಿಂದ ಅವರ ವಿರುದ್ಧವು ಪೊಲೀಸರು ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಕಲ್ಲಡ್ಕ ಪ್ರಭಾಕರ್ ವಿರುದ್ಧ ಮಂಗಳೂರು ಮುಸ್ಲಿಂ ಎನ್ನುವ ಸಂಘಟನೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆಯೊಡ್ಡಿದೆ. ಆದಾಗ್ಯೂ ಸೈಬರ್ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ. ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಸರಕಾರ ಯಾಕೆ ಹಿಂದೇಟು ಹಾಕುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.